ಮಂಗಳೂರು: "ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ" ಎಂದು ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಿ ಬೆಳಗಾವಿಯ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇದನ್ನು ಓದಿ: ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ, ಕೊಲೆ ಪ್ರಕರಣ ದಾಖಲಿಸಿ": ಸಿದ್ದರಾಮಯ್ಯ ಆಗ್ರಹ
"ಇದರ ಬಗ್ಗೆ ಸಂಪೂರ್ಣ ವಿಚಾರಣೆ ಮಾಡುತ್ತೇವೆ. ಸಂತೋಷ ಪಾಟೀಲ್ ದೇಹ ಉಡುಪಿಯ ಲಾಡ್ಜ್‌ನಲ್ಲಿ ಪತ್ತೆಯಾಗಿದೆ. ಖುದ್ದು ಎಸ್‌ಪಿ ಸ್ಥಳಕ್ಕೆ ಹೋಗಿದ್ದಾರೆ. ಪ್ರಾಥಮಿಕ ತನಿಖೆ ಈಗಷ್ಟೇ ನಡೆಯುತ್ತಿದೆ. ಮಂಗಳೂರಿನಿಂದ ಎಫ್‌ಎಸ್‌ಎಲ್ ಅಧಿಕಾರಿಗಳನ್ನು ಹೋಗಲು ಸೂಚಿಸಿದ್ದೇನೆ. ಪ್ರಾಥಮಿಕ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ. ಎಲ್ಲವನ್ನೂ ತನಿಖೆಗೆ ಒಳಪಡಿಸುತ್ತೇವೆ. ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು ಎಂಬುವುದನ್ನು ಚರ್ಚಿಸುತ್ತೇವೆ" ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇನ್ನು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಸಿದ್ದರಾಮಯ್ಯ ರಾಜೀನಾಮೆ ಏನಾದರೂ ಕೊಟ್ಟಿದ್ರಾ? ಎಂದು ಪ್ರಶ್ನಿಸಿದರು.
ಇದನ್ನು ಓದಿ: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ
"ಈಶ್ವರಪ್ಪ ಮೈಸೂರಿನಲ್ಲಿದ್ದಾರೆ. ನಾನೇ ವಿಚಾರಿಸುತ್ತೇನೆ. ಈಶ್ವರಪ್ಪ ವಿರುದ್ಧ ಮಾಡಿರುವ ಆರೋಪಕ್ಕೆ ಮಾನನಷ್ಟ ಮೊಕ್ಕದಮೆ ಹಾಕಿದ್ದರು. ತನಿಖೆಯಲ್ಲಿ ಇದೆಲ್ಲವೂ ಗೊತ್ತಾಗಲಿದೆ" ಎಂದು ಬೊಮ್ಮಾಯಿ ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ..