ಬೆಂಗಳೂರು: ಉಕ್ರೇನ್ ನಲ್ಲಿ (Ukraine) ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಕರೆತರುವ ಭರವಸೆ ನೀಡಿದರು.
ಇದನ್ನೂ ಓದಿ: 2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ: ಎಚ್ಡಿಕೆ
ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, 'ಖಾರ್ಕೀವ್ ದಿಂದ 30 ಕಿಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ' ಎಂದು ಮುಖ್ಯಮಂತ್ರಿಗಳಿಗೆ (Cheif Minister) ತಿಳಿಸಿದರು.
ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿಗಳು ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಕರ್ನಾಟಕ ಸರ್ಕಾರ (Karnataka Government) ನಿರಂತರವಾಗಿ ಸಂಪರ್ಕದಲ್ಲಿದೆ. ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: Naveen Gyanagoudar: ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ನೆನೆದು ಆರೋಗ್ಯಾಧಿಕಾರಿ ಕಣ್ಣೀರು
ಅಂದಾಜು 200 ಜನ ರಾಜ್ಯದ ವಿದ್ಯಾರ್ಥಿಗಳು ಖಾರ್ಕೀವ್ ನಲ್ಲಿ ಇದ್ದಾರೆ. ಗಗನಗೌಡ ಎಂಬ ಬೆಂಗಳೂರಿನ ಮೂಲದ ವಿದ್ಯಾರ್ಥಿ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜತೆ ಸಿಎಂ ಜೊತೆ ಮಾತನಾಡಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ. ಕೆ ಗೋಪಾಲಯ್ಯ (K Gopalaiah) ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.