ಹುಬ್ಬಳ್ಳಿ: ಉಕ್ರೇನ್ನಿಂದ ಸುರಕ್ಷಿತವಾಗಿ ವಾಪಸಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ(Dharwad Medical student Chaitra Sanshi)ಯವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಆತ್ಮಿಯ ಸ್ವಾಗತ ಕೋರಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಆಗಮಿಸಿದ ಚೈತ್ರಾರಿಗೆ ಹೂಗುಚ್ಚ ನೀಡುವ ಮೂಲಕ ಸಿಎಂ ಬರಮಾಡಿಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧಾರವಾಡ(Dharwad) ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ವಿದೇಶದಲ್ಲಿದ್ದರು. ಈಗಾಗಲೇ ಇಬ್ಬರು ಬಂದಿದ್ದಾರೆ. ಇನ್ನಿಬ್ಬರು ಕೂಡ ಗಡಿ ದಾಟಿದ್ದು, ಶೀಘ್ರದಲ್ಲಿಯೇ ರಾಜ್ಯಕ್ಕೆ ಸುರಕ್ಷಿತವಾಗಿ ಮರಳುವ ವಿಶ್ವಾಸವಿದೆ ಅಂತಾ ಹೇಳಿದರು.
ಇನ್ನೂ 200ಕ್ಕೂ ಹೆಚ್ಚು ಕರ್ನಾಟಕದ ವಿದ್ಯಾರ್ಥಿಗಳು ಉಕ್ರೇನ್(Russia-Ukraine War)ನಿಂದ ಆಗಮಿಸಬೇಕಾಗಿದೆ. ಚೈತ್ರಾ ಬಂದಿರುವುದು ನಮಗೆ ಶುಭ ಸಂದೇಶ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯಾರ್ಥಿಗಳು ಬರುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ಜೊತೆಗೆ ನಾವು ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.
ಉಕ್ರೇನ್ನಿಂದ ಸುರಕ್ಷಿತವಾಗಿ ವಾಪಸಾದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಬೆಳಿಗ್ಗೆ ಸ್ವಾಗತಿಸಿ, ಶುಭ ಹಾರೈಸಿದೆನು. pic.twitter.com/hKShxdMWuk
— Basavaraj S Bommai (@BSBommai) March 6, 2022
ಇದನ್ನೂ ಓದಿ: ಮೇಕೆದಾಟು ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಎಚ್ಡಿಕೆ
ತಾಯ್ನಾಡಿಗೆ ಆಗಮಿಸಿರುವ ಚೈತ್ರಾ(Chaitra Sanshi) ಉಕ್ರೇನ್ ನಲ್ಲಿ 3ನೇ ವರ್ಷದ ಮೆಡಿಕಲ್ ಓದುತ್ತಿದ್ದಳು. ಬಹಳಷ್ಟು ಜನ ವಿದ್ಯಾರ್ಥಿನಿಯರು ಅಲ್ಲಿ ಸಿಲುಕಿದ್ದರು. ಬಂಕರ್ ನಲ್ಲಿ ಸಿಲುಕಿದ್ದ ಚೈತ್ರಾ ಅಲ್ಲಿಂದ 4-5 ಕಿಮೀ ರಸ್ತೆ ಮೂಲಕ ನಡೆದುಕೊಂಡು ಬಂದಿದ್ದರು. ರಾಯಭಾರಿ ಕಚೇರಿ ಅಧಿಕಾರಿಗಳ ಸಹಾಯದಿಂದ ಅವರು ಮರಳಿ ಬರುವಂತಾಗಿದೆ. ಚೈತ್ರಾಳ ಬಗ್ಗೆ ಅವರ ಕುಟುಂಬಸ್ಥರು ತುಂಬಾ ಭಯಗೊಂಡಿದ್ರು, ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತ ಅವರ ಕುಟುಂಬಕ್ಕೆ ಧೈರ್ಯ ತುಂಬಿತ್ತು ಅಂತಾ ಹೇಳಿದರು.
ಉಕ್ರೇನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿಸಲು ಪ್ರಧಾನಿ ಮೋದಿ(Narendra Modi)ಅವರೇ ಖುದ್ದು ಕಾಳಜಿ ವಹಿಸಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಏರ್ ಲಿಫ್ಟ್ ಕಾರ್ಯ ನಡೆಯುತ್ತಿದೆ. ಉಕ್ರೇನ್ ಗಡಿಯಲ್ಲಿರುವ ನಾಲ್ಕೈದು ರಾಷ್ಟ್ರಗಳು ಭಾರತಕ್ಕೆ ಸಂಪೂರ್ಣ ಸಂಪೂರ್ಣ ಸಹಕಾರ ನೀಡುತ್ತಿವೆ. ಉಕ್ರೇನ್ ನಲ್ಲಿ ಶೆಲ್ ದಾಳಿಗೆ ಸಾವನ್ನಪ್ಪಿರುವ ನವೀನ್ ಮೃತದೇಹವನ್ನು ಸಹ ಕರೆತರುವ ಕಾರ್ಯ ನಡೆಯುತ್ತಿದೆ. ಆದಷ್ಟು ಬೇಗ ಮೃತದೇಹ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆಂದು ತಿಳಿಸಿದರು.
ಇದನ್ನೂ ಓದಿ: "ಭಾರತದ ಧ್ವಜವೇ ಉಕ್ರೇನ್ ನಲ್ಲಿ ನಮಗೆ ಶ್ರೀರಕ್ಷೆ".. ಯುದ್ಧದ ಭೀಕರತೆ ಬಿಚ್ಚಿಟ್ಟ ವಿದ್ಯಾರ್ಥಿನಿ
ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ವಿದ್ಯಾರ್ಥಿನಿ
ಯುದ್ಧಪೀಡಿತ ಉಕ್ರೇನ್(Russia Ukraine Crisis)ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಆಗಮಿಸಿದ ವಿದ್ಯಾರ್ಥಿನಿ ಚೈತ್ರಾ ಸಂಶಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಉಕ್ರೇನ್ ನಲ್ಲಿ ತುಂಬಾ ಕಠಿಣ ಪರಿಸ್ಥಿತಿ ಇತ್ತು. ನಮ್ಮ ದೇಶದ ರಾಯಭಾರ ಕಚೇರಿ ಅಧಿಕಾರಿಗಳು ತಮ್ಮ ಶಕ್ತಿಮೀರಿ ಸಹಾಯ ಮಾಡುತ್ತಿದ್ದಾರೆ. ನಾವು 7-8 ದಿನ ಬಂಕರ್ ನಲ್ಲಿಯೇ ಕಾಲ ಕಳೆದಿದ್ದೇವೆ. ದಿನಕ್ಕೆ ಒಂದೊತ್ತು ಊಟ ಮಾಡಿ ಬದುಕಿದ್ದೇವೆ ಅಂತಾ ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.