Basavaraja Bommai : ಕೇಂದ್ರದ 6 ಸಚಿವರೊಂದಿಗೆ ಪಿಎಂ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ

ಈ ಸಂದರ್ಭದಲ್ಲಿ ಮಾನ್ಯ ಪಿಎಂ ಮೋದಿ ಅವರು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನಿಡುವುದಾಗಿ ತಿಳಿಸಿ, ನೂತನ ಸಿಎಂ ಬೊಮ್ಮಾಯಿ ಅವರಿಗೆ ಶುಭಕೋರಿದರು.

Written by - Channabasava A Kashinakunti | Last Updated : Jul 30, 2021, 10:10 PM IST
  • ಮುಖ್ಯಮಂತ್ರಿ ಆದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಭಾರಿ ದೆಹಲಿಗೆ
  • ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಮ್ಮ ರಾಜ್ಯದ ಆರು ಕೇಂದ್ರ ಸಚಿವರೊಂದಿಗೆ
  • ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನಿಡುವುದಾಗಿ ತಿಳಿಸಿದ್ದಾರೆ
Basavaraja Bommai : ಕೇಂದ್ರದ 6 ಸಚಿವರೊಂದಿಗೆ ಪಿಎಂ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ title=

ನವದೆಹಲಿ : ಮುಖ್ಯಮಂತ್ರಿ ಆದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೊದಲ ಭಾರಿ ದೆಹಲಿಗೆ ಹೋಗಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಮ್ಮ ರಾಜ್ಯದ ಆರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ನಿರ್ಮಲ ಸೀತಾರಾಮನ್, ಆ ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಭೇಟಿಯಾಗಿದ್ದಾರೆ. 

ಈ ಸಂದರ್ಭದಲ್ಲಿ ಮಾನ್ಯ ಪಿಎಂ ಮೋದಿ(Narendra Modi) ಅವರು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನಿಡುವುದಾಗಿ ತಿಳಿಸಿ, ನೂತನ ಸಿಎಂ ಬೊಮ್ಮಾಯಿ ಅವರಿಗೆ ಶುಭಕೋರಿದರು.

ಇದಕ್ಕೂ ಮೊದಲು ಸಿಎಂ ಬೊಮ್ಮಾಯಿ(Basavaraja Bommai) ಅವರು, ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಹಲವು ವಿಷಯಗಳ ಕುರಿತು ಚರ್ಚಿಸಿದರು.

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಆಶೀರ್ವದಿಸಿದ ಮಾನ್ಯ ಅಧ್ಯಕ್ಷರಿಗೆ() ಇದೇ ಸಂದರ್ಭದಲ್ಲಿ ಸನ್ಮಾನಿಸಿ ಕೃತಜ್ಞತೆಗಳನ್ನು ಅರ್ಪಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News