ಹಾವೇರಿ : ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಈ ಬಗ್ಗೆ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಕರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉತ್ತರಿಸುತ್ತಾ, ಐಎಲ್ ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್ ಲಸಿಕೆ ನೀಡುವುದು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ , ಬೆಡ್ ಗಳು ಸೇರಿದಂತೆ ಮೂಲಭೂತಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು. ಜನರು ಮಾಸ್ಕ್ ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್ ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.


ಇದನ್ನೂ ಓದಿ : ಡಾ.ರಾಜ್ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ದೂರು-ಪ್ರತಿದೂರು ದಾಖಲು


ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರೋನಾ ಮುಂಜಾಗ್ರತಾ ಕ್ರಮ


ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕರೋನಾ ದಿಂದ ತೊಡಕುಂಟಾಗುವುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.


ಇದನ್ನೂ ಓದಿ : ಸಿನಿಮೀಯ ರೀತಿ ಕಾರ್ಯಾಚರಣೆ: ಹೊಸ ವರ್ಷಾಚರಣೆಗೆ‌ ಕಿಕ್ಕೇರಿಸಬೇಕಿದ್ದ 263 ಕೆಜಿ ಗಾಂಜಾ ಸೀಜ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.