ಚಾಮರಾಜನಗರ: ಇಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಭೇಟಿ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದಾರೆ.  ಚಾಮರಾಜನಗರ ಜಿಲ್ಲೆಗೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಬದಿಗೊತ್ತಿ  ರಾಜ್ಯದ ಮುಖ್ಯಮಂತ್ರಿಯೊಬ್ಬರು ಎರಡನೇ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಹೌದು, ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ ಅವರಿಂದ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿದರೂ ಸಹ ತದನಂತರ ಬಂದ ಬಿ.ಎಸ್.ಯಡಿಯೂರಪ್ಪ ಗಡಿಜಿಲ್ಲೆಗೆ ಕಾಲಿಡಲೇ ಇಲ್ಲ- ಆದರೆ ಬೊಮ್ಮಾಯಿ ಈಗ ಎರಡನೇ ಬಾರಿಗೆ ಗಡಿಜಿಲ್ಲೆಗೆ ಆಗಮಿಸುತ್ತಿದ್ದು ನೂರಾರು ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 


ಅಂದು ಮೌಢ್ಯ ಪ್ರಾರಂಭವಾಗುವ ಹೊತ್ತಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ತಂದೆ ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟಿದ್ದರೆ, ಮೌಢ್ಯ ಮಾಯವಾಗಿರುವ ಈ ಕಾಲದಲ್ಲಿ ಮಗ ಸಿಎಂ ಆಗಿ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ.


ಇದನ್ನೂ ಓದಿ- ಇನ್ಮುಂದೆ ಎಲ್ಲವೂ ಉಚಿತ: ಬಡವರ ಆರೋಗ್ಯ ಸಂಜೀವಿನಿ ‘ನಮ್ಮ ಕ್ಲಿನಿಕ್’ ಲೋಕಾರ್ಪಣೆಗೆ ಡೇಟ್ ಫಿಕ್ಸ್


1988ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಆರ್. ಬೊಮ್ಮಾಯಿ ಅವರು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಭೇಟಿ ಕೊಟ್ಟು ತಾಲೂಕು ಕಚೇರಿ ಸಂಕೀರ್ಣ ಮತ್ತು‌ ತಾಲೂಕು ಆಸ್ಪತ್ರೆ ಉದ್ಘಾಟಿಸಿದ್ದರು.  ತಂದೆಯ ಹಾದಿಯನ್ನೇ ಅನುಕರಿಸಿರುವ  ಎಸ್.ಆರ್. ಬೊಮ್ಮಾಯಿ ಅವರ ಪುತ್ರ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.


ಚಾಮರಾಜನಗರ ಜಿಲ್ಲೆಗೆ ಅಧಿಕಾರ ಹೋಗುತ್ತದೆ ಎನ್ನುವ ಅಪವಾದ ಆರಂಭವಾಗಿದ್ದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ವಿಶಿಷ್ಟ ಸಾಲಿನಲ್ಲಿ, ಅಗ್ರ ಸ್ಥಾನದಲ್ಲಿ ನಿಲ್ಲುವ 'ಹಿಂದುಳಿದ ವರ್ಗಗಳ ಹರಿಕಾರ' ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಿ. ದೇವರಾಜ ಅರಸು ಅವರ ಕಾಲದಿಂದ. ಡಿ. ದೇವರಾಜ ಅರಸು ಅವರನ್ನು ಹೊರತುಪಡಿಸಿ ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಆರ್. ಗುಂಡೂರಾವ್, ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಅಧಿಕಾರ ಕಳೆದುಕೊಂಡಿರುವ ಕೆಲ ಉದಾಹರಣೆಗಳಾಗಿವೆ.‌


ಇದನ್ನೂ ಓದಿ- Chamarajanagar: ರೈತನ ಮದುವೆಗೆ ಎತ್ತುಗಳೇ ವಿಶೇಷ ಅತಿಥಿಗಳು, ಜೋಡೆತ್ತಿಗೆ ಛತ್ರದಲ್ಲಿ ವಿಶೇಷ ವೇದಿಕೆ


ಜಗದೀಶ್ ಶೆಟ್ಟರ್ ಸಿಎಂ ಆಗಿದ್ದ ವೇಳೆ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡದಿದ್ದರೂ, ಈ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ದೇವಾಲಯ ಒಂದಕ್ಕೆ ಭೇಟಿ ಕೊಟ್ಟಿದ್ದರು. ಅವರ ಬಳಿಕ ಇದೀಗ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವ ಬಿಜೆಪಿಯ ಎರಡನೇ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ.


ಚಾಮರಾಜನಗರದಲ್ಲಿ ಇಂದಿನ  ಮುಖ್ಯಮಂತ್ರಿಗಳ ಕಾರ್ಯಕ್ರಮ ಎಲ್ಲೆಲ್ಲಿ: 
ಮೈಸೂರಿನಿಂದ ರಸ್ತೆಯ ಮೂಲಕ ಆಗಮಿಸುವ ಸಿಎಂ ಬೆಳಗ್ಗೆ 11.15ಕ್ಕೆ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವವರು. 


ಬಳಿಕ ಮಧ್ಯಾಹ್ನ 2.30ಕ್ಕೆ  ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣಕ್ಕೆ ಆಗಮಿಸಿ ಹನೂರು ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವವರು. ಸಂಜೆ 4.30 ಗಂಟೆಗೆ ಮೈಸೂರಿಗೆ ತೆರಳಲಿದ್ದು ಮಳೆ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದ ಭೇಟಿ ಕಾರ್ಯಕ್ರಮ ರದ್ದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.