ವಿಜಯಪುರ : ಸಿದ್ದರಾಮಯ್ಯ ಅವರು ಪ್ರವಾಸ ಮಾಡುತ್ತಿರುವ ಭಾಗದ ಶಾಸಕರನ್ನು ಗಟ್ಟಿಯಾಗಿ ಹಿಡಿದುಕೊಳ್ಳಲಿ. ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಇಷ್ಟೇ ಸಲಹೆ ನೀಡಲು ಸಾಧ್ಯ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪರ ಅಲೆ ಇದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 


ಇದನ್ನೂ ಓದಿ: 26 ಸಾವಿರ ಕೋಟಿ ರೈತರ ಸಾಲವನ್ನ ಮನ್ನಾ ಮಾಡಿದ ಕೀರ್ತಿ ಕುಮಾರಣ್ಣನಿಗೆ....ಕಾರ್ಕಳ ಸುನೀಲ್ ಕುಮಾರ್ ಕ್ಷೇತ್ರ


ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಅಭ್ಯರ್ಥಿಯನ್ನು ಹಾಕಬಾರದು ಎಂದು ಶ್ರೀ ರಾಮಸೇನೆಯವರು ಒತ್ತಡ ಹಾಕುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಕಾರ್ಕಳದಲ್ಲಿ ನಮ್ಮ ಮಂತ್ರಿ ಸುನೀಲ್ ಕುಮಾರ್ ಅವರು ಮೂರು ಬಾರಿ ಆರಿಸಿ ಬಂದಿದ್ದಾರೆ. ಸುನೀಲ್ ಕುಮಾರ್ ಅವರ ಕ್ಷೇತ್ರ ಕಾರ್ಕಳ. ಅವರು ಮನವಿ ಮಾಡುವ ಅಧಿಕಾರವಿದೆ. ಆದರೆ ರಾಷ್ಟ್ರೀಯ ಪಕ್ಷವಾಗಿ ನಾವು ಎಲ್ಲಾ 224 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.