ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ: ಸಿಎಂ ಬೊಮ್ಮಾಯಿ

CM Basavarj Bommai ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು.

Written by - Prashobh Devanahalli | Edited by - Bhavishya Shetty | Last Updated : Dec 5, 2022, 12:43 PM IST
    • ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ
    • ಮಹಾರಾಷ್ಟ್ರ ಹಾಗೂ ಕರ್ನಾಟಕದ ಜನರ ಮಧ್ಯೆ ಸಾಮರಸ್ಯವಿದೆ
    • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ: ಸಿಎಂ ಬೊಮ್ಮಾಯಿ title=
CM Bommai

CM Basavarj Bommai: ಹುಬ್ಬಳ್ಳಿ:  ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದರು.

ಇದನ್ನೂ ಓದಿ: ಶೀಘ್ರದಲ್ಲೇ ಶಿಗ್ಗಾಂವ್ ವಾಣಿಜ್ಯ ಕೇಂದ್ರವಾಗಲಿದೆ- ಸಿಎಂ ಬೊಮ್ಮಾಯಿ

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು.

ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ:

ಮಹಾರಾಷ್ಟ್ರ ಹಾಗೂ ಕರ್ನಾಟಕದ ಜನರ ಮಧ್ಯೆ ಸಾಮರಸ್ಯವಿದೆ. ಅದೇ ಸಂದರ್ಭದಲ್ಲಿ ಗಡಿ ವಿವಾದವೂ ಇದೆ. ಆದರೆ ಮಹಾರಾಷ್ಟ್ರ ಕ್ಯಾತೆ ತೆಗೆದು ಸುಪ್ರೀಂ ಕೋರ್ಟಿಗೆ ಹೋಗಿದೆ. ಈಗಿನ ಸಂದರ್ಭದಲ್ಲಿ ಪ್ರವಾಸ ಮಾಡುವುದು ಪ್ರಚೋದನಕಾರಿ ಕೆಲಸ. ಜನರಲ್ಲಿ ಭಾವನೆಗಳನ್ನು ಕೆರಳಿಸುವ ಕೆಲಸವಾಗುತ್ತದೆ. ಮತ್ತೊಮ್ಮೆ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಸೂಕ್ತ ಕ್ರಮ ಕೈಗೊಳ್ಳಲು ಹಿಂದೆ-ಮುಂದೆ ನೋಡುವುದಿಲ್ಲ:

ಆಕಸ್ಮಾತ್ ಬರುವ ಸಾಹಸ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ನಮ್ಮ ಸರ್ಕಾರ ಹಿಂದೆ-ಮುಂದೆ ನೋಡುವುದಿಲ್ಲ. ಹಿಂದೆ ಇಂತಹ ಸಂದರ್ಭದಲ್ಲಿ ಏನು ಕ್ರಮ ತೆಗೆದುಕೊಂಡಿದ್ದರೋ ಅದೇ ರೀತಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:  ಕಾಲ್ನಡಿಗೆಯೊಂದಿಗೆ ಅಂಜನಾದ್ರಿ ಬೆಟ್ಟದತ್ತ ಹೊರಟ ಮಾಲಾಧಾರಿಗಳು

ಮಕ್ಕಳಿಗೆ ಉತ್ತಮ ಶಿಕ್ಷಣ ನಮ್ಮ ಗುರಿ:

ಪ್ರತ್ಯೇಕ ಮುಸ್ಲಿಂ ಶಾಲೆ ಜೊತೆಗೆ ಪ್ರತ್ಯೇಕ ಕೇಸರಿ ಶಾಲೆಗಳನ್ನು ತೆರೆಯಲು ಒತ್ತಾಯ ಕೇಳಿ ಬಂದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಮೊದಲು ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಗುರಿ ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News