ನವನಗರದ ಕ್ಯಾನ್ಸರ್ ಆಸ್ಪತ್ರೆಗೆ 10 ಕೋಟಿ ಆರ್ಥಿಕ ನೆರವು ನುಡಿದಂತೆ ನಡೆದ ಸಿಎಂ ಬೊಮ್ಮಾಯಿ

ಆಸ್ಪತ್ರೆಯು ಕಳೆದ 45 ವರ್ಷಗಳಿಂದ ಸುಮಾರು 10ಕ್ಕಿಂತಲೂ ಹೆಚ್ಚು ಜಿಲ್ಲೆಗಳ ಬಡರೋಗಿಗಳ ಆಶಾಕಿರಣವಾಗಿದೆ. ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಇಎಸ್‌ಐ, ರೇಲ್ವೆ, ಇಸಿಎಚ್‌ಎಸ್ ಯೋಜನೆಯಡಿ ಪ್ರತಿ ತಿಂಗಳು ಸುಮಾರು 200 ಕ್ಕೂ ಹೆಚ್ಚು ಬಡ ರೋಗಿಗಳು ಹಾಗೂ ವರ್ಷಕ್ಕೆ 2,000 ಬಡರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 

Written by - Yashaswini V | Last Updated : Aug 5, 2022, 10:08 AM IST
  • ಆಸ್ಪತ್ರೆಯು ಕಳೆದ 45 ವರ್ಷಗಳಿಂದ ಸುಮಾರು 10ಕ್ಕಿಂತಲೂ ಹೆಚ್ಚು ಜಿಲ್ಲೆಗಳ ಬಡರೋಗಿಗಳ ಆಶಾಕಿರಣವಾಗಿದೆ.
  • ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಇಎಸ್‌ಐ, ರೇಲ್ವೆ, ಇಸಿಎಚ್‌ಎಸ್ ಯೋಜನೆಯಡಿ ಪ್ರತಿ ತಿಂಗಳು ಸುಮಾರು 200 ಕ್ಕೂ ಹೆಚ್ಚು ಬಡ ರೋಗಿಗಳು ಚಿಕಿತ್ಸೆ ಪಡೆಯುತ್ತಾರೆ.
  • ವರ್ಷಕ್ಕೆ 2,000 ಬಡರೋಗಿಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ.
ನವನಗರದ ಕ್ಯಾನ್ಸರ್ ಆಸ್ಪತ್ರೆಗೆ 10 ಕೋಟಿ ಆರ್ಥಿಕ ನೆರವು ನುಡಿದಂತೆ ನಡೆದ ಸಿಎಂ ಬೊಮ್ಮಾಯಿ title=
Navanagar Cancer Hospital

ಹುಬ್ಬಳ್ಳಿ: ಉತ್ತರ ಕರ್ನಾಟಕದ ಕ್ಯಾನ್ಸರ್ ರೋಗಿಗಳ ಪಾಲಿನ ಸಂಜೀವಿನಿಯಾಗಿರುವ ಹುಬ್ಬಳ್ಳಿಯ ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಹಾಗೂ ಸಂಶೋಧನಾ ಸಂಸ್ಥೆಗೆ ರಾಜ್ಯ ಸರ್ಕಾರ 10 ಕೋಟಿ ಆರ್ಥಿಕ ನೆರವು ಬಿಡುಗಡೆ ಮಾಡಿದೆ. 

ವಾಸ್ತವವಾಗಿ, ಆಸ್ಪತ್ರೆಯ ಚೇರಮನ್ ಡಾ.ಬಿ.ಆರ್. ಪಾಟೀಲ, ಕ್ಯಾನ್ಸರ್ ಥೆರಪಿ ಸಂಸ್ಥೆಯ ಅಧ್ಯಕ್ಷ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ, ಚೇರ್ಮನ್ ಡಾ. ಬಿ.ಆರ್. ಪಾಟೀಲ, ನಿರ್ದೇಶಕ ಮಹೀಂದ್ರ ಸಿಂಘಿ ಹಾಗೂ ಅನಿತಾ ಪಾಟೀಲ ಅವರನ್ನೊಳಗೊಂಡ ನಿಯೋಗ ಆಸ್ಪತ್ರೆಯ ನವೀಕರಣ ಹಾಗೂ ಅತ್ಯಾಧುನಿಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಜೆಟ್‌ನಲ್ಲಿ ನೆರವು ನೀಡುವ ಭರವಸೆ ನೀಡಿದ್ದರು. 

ಇದನ್ನೂ ಓದಿ- ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಸಾವು

ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ನೆರವು ಆ. 1 ರಂದು ಕ್ಯಾನ್ಸರ್ ಸಂಸ್ಥೆಯ ಖಾತೆಗೆ ಜಮಾ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ- ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಆಸ್ಪತ್ರೆಯು ಕಳೆದ 45 ವರ್ಷಗಳಿಂದ ಸುಮಾರು 10ಕ್ಕಿಂತಲೂ ಹೆಚ್ಚು ಜಿಲ್ಲೆಗಳ ಬಡರೋಗಿಗಳ ಆಶಾಕಿರಣವಾಗಿದೆ. ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಇಎಸ್‌ಐ, ರೇಲ್ವೆ, ಇಸಿಎಚ್‌ಎಸ್ ಯೋಜನೆಯಡಿ ಪ್ರತಿ ತಿಂಗಳು ಸುಮಾರು 200 ಕ್ಕೂ ಹೆಚ್ಚು ಬಡ ರೋಗಿಗಳು ಹಾಗೂ ವರ್ಷಕ್ಕೆ 2,000 ಬಡರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ದೊರೆಯುವ ಉದ್ದೇಶದಿಂದ ನೆರವು ನೀಡಲಾಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News