.ಬೆಂಗಳೂರು: ನಿರೀಕ್ಷೆಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್‌ನಲ್ಲಿ ಮಹಿಳೆಯರಿಗಾಗಿ 'ಗೃಹಿಣಿ ಶಕ್ತಿ' ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು. ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದಲ್ಲದೆ, ಕುಟುಂಬಕ್ಕಾಗಿ ಶ್ರಮಿಸುವ ಮಹಿಳೆಯರಿಗಾಗಿ ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು.  ಈ ಯೋಜನೆಯಡಿ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 


ಇದಲ್ಲದೆ, ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based Industry) ಪ್ರಾರಂಭಿಸಲು ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ತರಬೇತಿಯನ್ನು ನೀಡಲಾಗುವುದು. ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣದ ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ. 


ಇದನ್ನೂ ಓದಿ- ಬೊಮ್ಮಾಯಿ ಬಜೆಟ್‍ನಲ್ಲಿ ರೈತರಿಗೆ ಬಂಪರ್ ಗಿಫ್ಟ್


ಆರೋಗ್ಯ ಪುಷ್ಟಿ ಯೋಜನೆ: 
ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು 'ಆರೋಗ್ಯ ಪುಷ್ಟಿ' ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ, ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.


ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌:
ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ರಾಜ್ಯದ ಒಟ್ಟು 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ 1,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.


ಇದನ್ನೂ ಓದಿ- ರಾಜ್ಯ ಬಜೆಟ್ 2023-24: ಪ್ರತಿ ಗ್ರಾಮ ಪಂಚಾಯಿತಿ ಸಶಕ್ತಿಗೆ ₹780 ಕೋಟಿ ಅನುದಾನ


ರಾಜ್ಯದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ 'ವಿದ್ಯಾವಾಹಿನಿ' ಯೋಜನೆಯಡಿಯಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದಲ್ಲಿನ ಒಟ್ಟು 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂದವರು ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.