ಬೀದರ್‌: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಭಾನುವಾರ ಬೆಳಿಗ್ಗೆ ಟ್ರಕ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಸ್ಥರ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಮಾರಾಟಕ್ಕೆ ಇಟ್ಟಿದ್ದು ಯಾರು?: ಬಿಜೆಪಿಗೆ ಎಚ್‌ಡಿಕೆ ಪ್ರಶ್ನೆ


ಇನ್ನೂ ಗಾಯಗೊಂಡವರ ಚಿಕಿತ್ಸೆ ಬಗ್ಗೆ ಕಾಳಜಿ ವಹಿಸಿರುವ ಸಿಎಂ ಬೊಮ್ಮಾಯಿ, ಯಾವುದೇ ಕಾರಣಕ್ಕೂ ಹೆದರಬೇಡಿ. ಅಗತ್ಯ ಚಿಕಿತ್ಸೆ ನೀಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜತೆ ಮಾತನಾಡಲಾಗಿದೆ. ಅಲ್ಲಿನ ಸ್ಥಳೀಯ ಅಧಿಕಾರಿಗಳು ಸಹಕರಿಸಲಿದ್ದಾರೆ. ಬೇಗನೆ ಅವರನ್ನು ರಾಜ್ಯಕ್ಕೆ ಕರೆಸಿಕೊಳ್ಳಲಾಗುವುದು ಎಂದು ಧೈರ್ಯ ಹೇಳಿದ್ದಾರೆ. 


ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ ರಸ್ತೆಯಲ್ಲಿ ಭಾನುವಾರ ಮುಂಜಾನೆ ರಸ್ತೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಬೀದರ್ ನಗರದ ಗುಂಪಾ ಬಡಾವಣೆಯ ಒಂದೇ ಕುಟುಂಬದ 7 ಜನರು ಸಾವನಪ್ಪಿದ್ದು, 9 ಜನ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. 


ಇದನ್ನೂ ಓದಿ: ಟೋಫಿ ಧರಿಸಿದ ಯುವಕನಿಗೆ ಥಳಿತ, ಪ್ರಾಂಶುಪಾಲರು ಹಾಗೂ ಪೋಲಿಸರ ವಿರುದ್ಧ ಪ್ರಕರಣ


ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್​ ಹಾಗೂ ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿತ್ತು. ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿ ಏಳು ಮಂದಿ ಯಾತ್ರಾರ್ಥಿಗಳು ಅಸುನೀಗಿದ್ದಾರೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಇಬ್ಬರು ಮೃತಪಟ್ಟಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.