ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ ತಿರುಗೇಟು

ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್  ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.

Written by - Prashobh Devanahalli | Edited by - Bhavishya Shetty | Last Updated : Nov 29, 2022, 12:09 PM IST
    • ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ?
    • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು
    • ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಬಗ್ಗೆ ರಾಜಕೀಯ ಚರ್ಚೆ
ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ ತಿರುಗೇಟು
Chief Minister Basavaraj Bommai

ನವದೆಹಲಿ: ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು  ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಇದನ್ನೂ ಓದಿ: ಪ್ರೇಯಸಿ ಜೊತೆ ಐಷಾರಾಮಿ ಜೀವನ ನಡೆಸೋಕೆ ಎಟಿಎಂ ದೋಚಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ

ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸಚಿವರ ಭೇಟಿ:

ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್  ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.

ಇದನ್ನೂ ಓದಿ: ಯುವ ರೈತರಿಗೆ ಸಿಗುತಿಲ್ಲ ಕನ್ಯಾಮಣಿಗಳು, ಆತಂಕದಲ್ಲಿ ಕೃಷಿಕರು

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

More Stories

Trending News