ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸಂಧಾನ ಯಶಸ್ವಿ, ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡಿಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಚಿವ ಸಿ.ಸಿ.ಪಾಟೀಲ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮಾತುಕತೆ ನಡೆಸಿದ್ದು, ಯಶಸ್ವಿಯಾಗಿದೆ.
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡಿಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಚಿವ ಸಿ.ಸಿ.ಪಾಟೀಲ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮಾತುಕತೆ ನಡೆಸಿದ್ದು, ಯಶಸ್ವಿಯಾಗಿದೆ.
ಇದನ್ನೂ ಓದಿ: ದೇಶದ ಅತಿದೊಡ್ಡ ಐಕಿಯಾ ಮಳಿಗೆ ಉದ್ಘಾಟಿಸಿದ ಸಿಎಂ, ಸ್ಥಳೀಯರಿಗೆ ಶೇ.75 ರಷ್ಟು ಉದ್ಯೋಗಾವಕಾಶ
ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕೆಂಬ ಬೇಡಿಕೆ ಈಡೇರಿಕೆ ವಿಳಂಬವಾಗುತ್ತಲೇ ಇತ್ತು. ಪಂಚಮ ಸಾಲಿ ಸಮುದಾಯಕ್ಕೆ ಮೀಸಲಾತಿ ಬೇಡಿಕೆ ಈಡೇರಿಕೆಗೆ ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಲವು ಬಾರಿ ಪ್ರತಿಭಟನೆಗಳು ಸಹ ನಡೆದಿವೆ. 2ಎ ಮೀಸಲಾತಿಗೆ ಆಗ್ರಹಿಸಿ ಜೂನ್ 27ರಂದು ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ 50 ಸಾವಿರ ಜನರು ಧರಣಿ ನಡೆಸುತ್ತೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದರು.
ಈ ಬೆನ್ನಲ್ಲೇ ಸಂಧಾನ ಯಶಸ್ವಿಯಾಗಿದ್ದು, ಸಿಎಂ ಮಾತಿಗೆ ಒಪ್ಪಿಗೆ ಸೂಚಿಸಿ ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ನಡೆಸುವುದನ್ನು ಪಂಚಮಸಾಲಿ ಜಯಮೃತ್ಯುಂಜಯ ಶ್ರೀಗಳು ಹಿಂಪಡೆದಿದ್ದಾರೆ. ಎರಡು ತಿಂಗಳಲ್ಲಿ ಮೀಸಲಾತಿ ಪರಿಶೀಲನೆ ಮತ್ತು ಸರ್ವೇ ಕಾರ್ಯ ಮುಗಿಸಲಾಗುವುದು. ಒಬಿಸಿ ಆಯೋಗದಿಂದ ವರದಿ ಪಡೆದು ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ಇನ್ನೇನೂ ಕೆಲವೇ ಕ್ಷಣಗಳಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಇದನ್ನೂ ಓದಿ: Maharashtra Political Crisis: ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆಯ ಹಿಂಟ್ ಕೊಟ್ಟ ರಾವತ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.