ಬೆಂಗಳೂರು: ಕೊರೊನಾ ನಾಲ್ಕನೇ ಅಲೆಯ ಆತಂಕ ಮತ್ತೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇರಳ ರಾಜ್ಯ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‌ 27ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಯನ್ನು ನೀಡಲಿದ್ದಾರೆ. ಆ ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ. ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತ ವಿಶೇಷ ಸಭೆ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣ ಉಲ್ಬಣ ಮತ್ತು ನಿಯಂತ್ರಣ ಕ್ರಮಗಳ ಸಿಎಂ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ: ನಮಗೇ ಮಗು ಕೊಡಿ ಎಂದು ದುಂಬಾಲು ಬಿದ್ದ ಜನ


ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ಭಾರತದಲ್ಲಿ ಭಾನುವಾರ ಕೋವಿಡ್ -19 ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ ನಗರದಲ್ಲಿ 132 ಹೊಸ ಕೇಸ್ ದಾಖಲಾಗಿದೆ. 2ನೇ ಅಲೆ ಸಂದರ್ಭದಲ್ಲಿ ನಿರ್ಲಕ್ಷ್ಯದಿಂದ ಸಮಸ್ಯೆಯಾಗಿತ್ತು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಜನರು ಕೂಡ ಕೊರೊನಾ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ನಿನ್ನೆ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. 


ಕೆಲ‌ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ರೇಟ್ ಏಕಾಏಕಿ ಹೆಚ್ಚಳವಾಗಿದೆ. ಇದು ಜನರಲ್ಲಿ ನಾಲ್ಕನೇ ಅಲೆಯ ಆತಂಕವನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಸಹ ಕಟ್ಟೆಚ್ಚರವಹಿಸಲು‌ ಸೂಚಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಪ್ರಧಾನಿ ಸಭೆಗೂ ಮುನ್ನ ಆರೋಗ್ಯ ಇಲಾಖೆ ಮತ್ತು ತಜ್ಞರ ಸಭೆ ನಡೆಸಿ ಸಿಎಂ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ. 


ಇದನ್ನೂ ಓದಿ: ಕಾಂಗ್ರೆಸ್ ಇಬ್ಭಾಗವಾಗಲಿದೆ; ಬಿಜೆಪಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರದ ಯೋಗ- ನಳಿನ್‍ಕುಮಾರ್ ಕಟೀಲ್


ಸಭೆಯಲ್ಲಿ ಆರೋಗ್ಯ ಸಚಿವರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ‌ ಅಧಿಕಾರಿಗಳು, ಸರ್ಕಾರದ ಹಿರಿಯ ಅಧಿಕಾರಿಗಳು ಸೇರಿದಂತೆ ಕೆಲ ಸಚಿವರು ಭಾಗಿಯಾಗಲಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.