Cabinet Meeting: ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು? ಇಲ್ಲಿದೆ ನೋಡಿ ಮಾಹಿತಿ
ರಾಜ್ಯಾದ್ಯಂತ ಯಾವುದೇ ಸಭೆ, ಸಮಾರಂಭ ಮಾಡಬೇಕಿದ್ದರೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಲಾಕ್ ಡೌನ್(Lockdown) ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ ಎನ್ನಲಾಗಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಜನರು ಕಟ್ಟು ನಿಟ್ಟಿನ ಕ್ರಮ ಅನುಸರಿಸಬೇಕು. ರಾಜ್ಯಾದ್ಯಂತ ಯಾವುದೇ ಸಭೆ, ಸಮಾರಂಭ ಮಾಡಬೇಕಿದ್ದರೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.
'ಬಟ್ಟೆ ವ್ಯಾಪಾರದಲ್ಲಾದರೂ ಯಶಸ್ಸು ಸಿಗಲಿ' - ಶ್ರೀ ರಾಮುಲು ಹಾರೈಕೆ
ಗಡಿ ಜಿಲ್ಲೆಗಳಲ್ಲಿ ಅಗತ್ಯ ಎಚ್ಚರಿಕೆ ಕ್ರಮ ವಹಿಸಬೇಕು. ಜನರು ಮನೆಯಿಂದ ಹೊರಗೆ ಹೋದಾಗ ಕಡ್ಡಾಯವಾಗಿ ಮಾಸ್ಕ್(Mask) ಧರಿಸಬೇಕು. ಗುಂಪುಗೂಡದ ರೀತಿ ಎಚ್ಚರಿಕೆವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ - ಸಿದ್ದರಾಮಯ್ಯ ಎಚ್ಚರಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.