ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ (BS Yediyurappa) COVID-19 ಪಾಸಿಟಿವ್ ಬಂದಿರುವುದನ್ನು ಸ್ವತಃ ಅವರೇ ಅಧಿಕೃತ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಈಗ ಅವರ ಸಂಪರ್ಕದಲ್ಲಿದ್ದ ಪುತ್ರಿ ಪದ್ಮಾವತಿ ಅವರಿಗೂ COVID-19 ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಪುತ್ರ ಬಿ.ವೈ. ವಿಜಯೇಂದ್ರ (BY Vijayendra), ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದರು. ಯಡಿಯೂರಪ್ಪ ಸಂಪರ್ಕಕ್ಕೆ ಬಂದಿದ್ದ ಕಾರಣ ವಿಜಯೇಂದ್ರ ಕೂಡ COVID-19 ಪರೀಕ್ಷೆ ಮಾಡಿಸಿಕೊಂಡಿದ್ದು ಅವರ ವರದಿ ನೆಗೆಟಿವ್ ಬಂದಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇರುವವರಿಗೆ ರೋಟಿನ್ COVID-19 ಟೆಸ್ಟ್ ಮಾಡಿಸಲಾಗಿದೆ. ಆಗ ಸಿಎಂ ಪುತ್ರಿ ಪದ್ಮಾವತಿ ಅವರಿಗೆ ಕೋವಿಡ್-19 (COVID-19) ಪಾಸಿಟಿವ್ ಬಂದಿದೆ. ಸದ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿಕಿತ್ಸೆ ಪಡೆಯುತ್ತಿದ್ದು ಅದೇ ಆಸ್ಪತ್ರೆಯಲ್ಲಿ ಪದ್ಮಾವತಿ ಅವರನ್ನೂ ದಾಖಲಿಸಲಾಗಿದೆ.
COVID-19 ಮಧ್ಯೆ ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ಇದಲ್ಲದೆ ಯಡಿಯೂರಪ್ಪ ಅವರ ವಿಶೇಷ ಕರ್ತವ್ಯಾಧಿಕಾರಿ ವಿಜಯ ಮಹಂತೇಶ್ ಅವರನ್ನೂ COVID-19 ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರ ವರದಿ ನೆಗೆಟಿವ್ ಬಂದಿದೆ. ಇನ್ನೂ ಕೆಲವರ ವರದಿ ಇವತ್ತು ಬರಲಿದೆ. ನೆಗೆಟಿವ್ ಬಂದಿದ್ದರೂ ವಿಜಯೇಂದ್ರ ಒಂದು ವಾರ ಸೆಲ್ಫ್ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ ಎಂದು ತಿಳಿದುಬಂದಿದೆ.
"ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದರು.
ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಡಿ.ಕೆ. ಶಿವಕುಮಾರ್ ಕವನ ವಾಚನ
ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರತಿಪಕ್ಷದ ನಾಯಕರೂ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹಾರೈಸಿದ್ದಾರೆ.
ಅಲ್ಲದೆ ಅವರ ಸಹೋದ್ಯೋಗಿ ಶಾಸಕರು ಹಾಗೂ ಸಚಿವರು ಬಿಎಸ್ವೈ ಅವರಿಗೆ ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದ್ದಾರೆ. ರಾಜ್ಯದ ವೈದಕೀಯ ಸಚಿವ ಡಾ.ಸುಧಾಕರ್.ಕೆ "ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ @BSYBJP ರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.