ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶಹಬ್ಬಾಸ್ ಗಿರಿ ನೀಡಿದ್ದಾರೆ. ಗೋವಾದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ‘ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪನವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ’ ಅಂತಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿಯಾಗಿ 2 ವರ್ಷ ಪೂರೈಸಿರುವ ಬಿಎಸ್​ವೈ ಅವರಿಗೆ ಜೆ.ಪಿ.ನಡ್ಡಾ(JP Nadda) ಬಹುಪರಾಕ್ ಹೇಳಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾತುಗಳನ್ನಾಡಿಲ್ಲ. ಕರ್ನಾಟಕದಲ್ಲಿ ಬಿಎಸ್​ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಅವರು ಸರಿಯಾಗಿ ನಿರ್ವಹಿಸುತ್ತಿದ್ದಾರೆ. ಕರ್ನಾಟಕದಲ್ಲಿ ಯಾವುದೇ ರೀತಿಯ ರಾಜಕೀಯ ಅಸ್ಥಿರತೆ ಪರಿಸ್ಥಿತಿ ಇಲ್ಲ ಅಂತಾ ನಡ್ಡಾ ಹೇಳಿದ್ದಾರೆ.


ಇದನ್ನೂ ಓದಿ: ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ


BS Yediyurappa) ಭಾನುವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದರು. ಈ ವೇಳೆ ವರಿಷ್ಠರ ಸಂದೇಶದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ‘ನಾನು ಶಕ್ತಿಮೀರಿ ಕೆಲಸ ಮಾಡಿದ್ದೇನೆಂದು ನನಗೆ ಅನ್ನಿಸುತ್ತಿದೆ.  ಅಧಿಕಾರ ಇರಲಿ, ಇಲ್ಲದಿರಲಿ ರಾಜ್ಯದಲ್ಲಿ  ಪಕ್ಷವನ್ನು ಕಟ್ಟಬೇಕಾಗಿದೆ. ರಾಷ್ಟ್ರೀಯ ನಾಯಕರು ಹೇಳಿದಂತೆ ನಾನು ನಡೆದುಕೊಳ್ಳುತ್ತೇನೆ. ನೂರಕ್ಕೆ ನೂರರಷ್ಟು ಪ್ರಧಾನಿ ಮೋದಿ ಹೇಳಿದಂತೆ ನಾನು ಕೇಳುತ್ತೇನೆ’ ಅಂತಾ ಹೇಳಿದ್ದಾರೆ.


ಜೆ.ಪಿ.ನಡ್ಡಾ(JP Nadda)ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರೀಯ ಅಧ್ಯಕ್ಷರ ಹೇಳಿಕೆ ಬಗ್ಗೆ ನನಗೆನೂ ಗೊತ್ತಿಲ್ಲ, ಆ ಬಗ್ಗೆ ತಿಳಿದುಕೊಳ್ಳುತ್ತೇನೆ. ಬೆಂಗಳೂರಿಗೆ ಹೋದ ಮೇಲೆಯೇ ವಿಷಯ ಗೊತ್ತಾಗುತ್ತದೆ. ರಾಷ್ಟ್ರೀಯ ನಾಯಕರು ಹೇಳಿದಂತೆ ಕೇಳುವುದು ನನ್ನ ಕರ್ತವ್ಯ, ಕಾದು ನೋಡೋಣ’ ಎಂದು ಬಿಎಸ್​ವೈ ಹೇಳಿದ್ದಾರೆ.


ಇದನ್ನೂ ಓದಿ: Heavy Rain in Karnataka : ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಭೀತಿ : 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'


ಇನ್ನೂ ಸ್ಪಷ್ಟವಾಗಿಲ್ಲ ಹೈಕಮಾಂಡ್ ಸಂದೇಶ!


ರಾಜ್ಯ ಬಿಜೆಪಿ ಸರ್ಕಾರ(BJP Govt.) ಅಧಿಕಾರಕ್ಕೆ ಬಂದು ನಾಳೆ(ಜುಲೈ 26)ಗೆ 2 ವರ್ಷ ಪೂರ್ಣವಾಗಲಿದೆ. ಸಿಎಂ ಬದಲಾವಣೆ ವಿಚಾರವಾಗಿ ಇದುವರೆಗೂ ಕೇಂದ್ರ ನಾಯಕರಿಂದ ಯಾವುದೇ ಸ್ಪಷ್ಟ ಸಂದೇಶ ದೊರೆತಿಲ್ಲ. ಹೀಗಾಗಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಭಾರೀ ಕುತೂಹಲ ಮೂಡಿದೆ.  


ಭಾನುವಾರ ಸಂಜೆ ಬಿಜೆಪಿ ಹೈಕಮಾಂಡ್ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಅಂತಾ ಮಾತುಗಳು ಕೇಳಿಬಂದಿದ್ದವು. ಪಕ್ಷದ ವರಿಷ್ಠರ ತೀರ್ಮಾನಕ್ಕೆ ತಾವು ಬದ್ಧ. ನಾನು ರಾಷ್ಟ್ರೀಯ ನಾಯಕರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ  ಅಂತಾ​ ಈಗಾಗಲೇ ಬಿಎಸ್​ವೈ(BSY) ಕೂಡ ತಿಳಿಸಿದ್ದಾರೆ. ಸರ್ಕಾರ 2 ವರ್ಷ ಪೂರೈಸಿರುವ ಹಿನ್ನೆಲೆ ನಾಳೆ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ, ಪ್ರವಾಹ ಸೇರಿದಂತೆ ರಾಜ್ಯದಲ್ಲಿ ಅನೇಕ ಸಮಸ್ಯೆಗಳು ಇವೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸರಿಯಲ್ಲವೆಂದು ಭಾವಿಸಿರುವ ಹೈಕಮಾಂಡ್ ನಾಯಕತ್ವ ಬದಲಾವಣೆ ಬಯಸುತ್ತಿಲ್ಲ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ