Karnataka Lockdown Relaxation : ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್ವೈ!
ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ
ಬೆಂಗಳೂರು : ಕೊರೋನಾ ನಿರೀಕ್ಷಿತ ಮಟ್ಟದಲ್ಲಿ ಕಡಿಮೆ ಆಗದ ಕಾರಣ ಜೂ. 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ದ್ವಿತೀಯ PUC ಫಲಿತಾಂಶಕ್ಕೆ SSLC ಅಂಕವೂ ಪರಿಗಣನೆ!
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ(Covid Situation) ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Heavy Rainfall : ಇನ್ನೆರಡು ದಿನ ರಾಜ್ಯದೆಲ್ಲೆಡೆ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'
ಲಾಕ್‌ಡೌನ್ ಪ್ಯಾಕೇಜ್ ಕುರಿತು ಮಾತನಾಡಿರುವ ಅವರು, ಲಾಕ್‌ಡೌನ್(Lockdown) ಕಾರಣವಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದೆವು. ಇಂದು ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಹಣ ಬಿಡುಗಡೆ ಮಾಡಿದ್ದೇವೆ. ಒಟ್ಟು 25 ಲಕ್ಷ ಕಾರ್ಮಿಕರಿಗೆ ಹಣ ಬಿಡುಗಡೆಯಾಗಿದೆ. 4 ಲಕ್ಷ ಜನರಿಗೆ ಇಂದು 10 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಅಸಂಘಟಿತ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಆಪ್ ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : 'KSRTC' ಟ್ರೇಡ್ ಮಾರ್ಕ್ ರದ್ದುಗೊಳಿಸಿದ್ದಕ್ಕೆ ಕೆಎಸ್‌ಆರ್‌ಟಿಸಿ' ಹೇಳಿದ್ದೇನು?
ಕೋವಿಡ್(COVID-19) ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೂ ವೈರಾಣು ಹರಡುವಿಕೆ ತಡೆಯಬೇಕಿದೆ. ಆರೋಗ್ಯ ಪರಿಣಿತರ ಸಲಹೆ ಪಾಲಿಸಬೇಕಿದೆ. ಆದ್ದರಿಂದ ಜೂನ್ 14ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗುತ್ತದೆ ಎಂದು ಜೂನ್ 3ರಂದು ಹೇಳಿದ್ದರು. ಜೊತೆಗೆ 2ನೇ ಹಂತದಲ್ಲಿ 500 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಿದ್ದರು.
ಇದನ್ನೂ ಓದಿ : Krishna Raja Wadiyar IV Birth Anniversary: ಕರ್ನಾಟಕಕ್ಕೆ ನೀಡಿದ ಅವರ ಕೊಡುಗೆಗಳು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ