ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವರಿಗೆ ಮತ್ತು ಬಿಜೆಪಿ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ನಾಳೆ ಅಂದ್ರೆ ಮಂಗಳವಾರ (ನಾಳೆ) ತಮ್ಮ ಸರ್ಕಾರಿ‌ ನಿವಾಸದಲ್ಲಿ ಸಿಎಂ, ಸಚಿವರಿಗೆ ಮತ್ತು ಬಿಜೆಪಿ ಶಾಸಕರಿಗೆ ಸಿಎಂ ನಿವಾಸದಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಕುತೂಹಲ ಮೂಡಿಸಿದೆ.


COMMERCIAL BREAK
SCROLL TO CONTINUE READING

ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ಅವರು ಈ ಡಿನ್ನರ್ ಪಾರ್ಟಿ ಕೊಡುತ್ತಿದ್ದಾರೆ ಎನ್ನಲಾಗಿದೆ.


Budget 2021 : ಇದೊಂದು ಆತ್ಮ ಬರ್ಬರ ಬಜೆಟ್- ಸಿದ್ದರಾಮಯ್ಯ


ಕೆಲವರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ ಅಂತ ಅಸಮಾಧಾನಗೊಂಡಿದ್ದಾರೆ. ಇನ್ನು ಕೆಲವರು ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದಾರೆ. ಅಲ್ಲದೇ ಖಾತೆ ಹಂಚಿಕೆ ಬಗ್ಗೆಯೂ ಸಿಎಂ ಮೇಲೆ ಬೇಸರಗೊಂಡಿದ್ದಾರೆ.


"ಹುಣಸೋಡಿನಲ್ಲಿ ಸಂಭವಿಸಿದ್ದು ಬರಿಯ ಸ್ಪೋಟವಷ್ಟೇ ಅಲ್ಲ, ಅದು ಬಡ ಕೂಲಿಕಾರರ ಕೊಲೆ"


ಈ ಹಿನ್ನೆಲೆಯಲ್ಲಿ ಸಿಎಂ ಔತಣಕೂಟದ ಮೂಲಕ ಎಲ್ಲರನ್ನೂ ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಅಲ್ಲದೇ ಮುಂದೆ ರಾಜ್ಯ ಬಜೆಟ್ ಇರುವುದರಿಂದ ಎಲ್ಲರನ್ನು ಗಣನೆಗೆ ತೆಗೆದುಕೊಳ್ಳಲು ಈ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ.


HD Kumaraswamy: 'ಕಾಂಗ್ರೆಸ್‌ ನೆರಳಿನಲ್ಲಿರುವ ಸಿದ್ದರಾಮಯ್ಯ , ಸ್ವಂತ ಪಕ್ಷ ಕಟ್ಟಿ ಚುನಾವಣೆ ನಡೆಸಲಿ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.