ಬೆಳಗಾವಿ: ಜಿಲ್ಲೆಯಲ್ಲಿ  COVID-19  ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

COVID-19 ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.


ಮುನಿರತ್ನಗೆ ರಾಜರಾಜೇಶ್ವರಿ ನಗರದ ಟಿಕೆಟ್ ಸಿಗುತ್ತಾ? ಎಲ್ಲವೂ ಸಸ್ಪೆನ್ಸ್!


ಕೋವಿಡ್ -19 (COVID-19) ತಪಾಸಣೆಗೆ ಸಂಬಂಧಿಸಿದಂತೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.


ಜಿಲ್ಲೆಯಲ್ಲಿ  ಕರೋನಾವೈರಸ್ (Coronavirus) ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ ಎಂದರು.


ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ತೀರ್ಮಾನ ಮಾಡಿದ್ದೇವೆ: ಸಿದ್ದರಾಮಯ್ಯ


ಮಾರ್ಗಸೂಚಿಗಳ ಅನುಷ್ಠಾನಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಗೃಹಸಚಿವರಾದ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಉಪಸ್ಥಿತರಿದ್ದರು.