ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಮಧ್ಯೆ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಇಂದು ಅಗತ್ಯವಿದ್ದಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ(BS Yediyurappa), ಜನರು ತಮ್ಮ ಒಳಿತಿಗಾಗಿ ನಡೆದುಕೊಳ್ಳಬೇಕಾಗಿದೆ. ಸಾರ್ವಜನಿಕರು ತಮ್ಮ ಸುರಕ್ಷೆತೆಯ ಬಗ್ಗೆ ನಿರ್ಲಕ್ಷಿಸಿದರೆ  ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾ ಗುತ್ತದೆ. ಅಗತ್ಯವಿದ್ದರೆ ಮತ್ತು ಅಗತ್ಯವಿದ್ದಲ್ಲಿ, ನಾವು ಲಾಕ್‌ಡೌನ್ ವಿಧಿಸುತ್ತೇವೆ ”ಎಂದು ಹೇಳಿದ್ದಾರೆ.


ಇದನ್ನೂ ಓದಿ : Ramesh Jarkiholi CD Case: ರಮೇಶ್ ಜಾರಕಿಹೊಳೆ ಸಿಡಿ ಕೇಸ್ ಗೆ ಬ್ಲಾಸ್ಟಿಂಗ್ ಟ್ವಿಸ್ಟ್..!


ರಾಜ್ಯದಲ್ಲಿ ಕೊರೋನಾ ಪ್ರಕರಣಗಳು(Corona Cases) ಹೆಚ್ಚಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, ನಾವು  ಸೂಕ್ಷ್ಮವಾಗಿ ಪರಿಸ್ಥಿತಿಯನ್ನ ಗಮನಿಸುತ್ತಿದ್ದೆವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಕ ವೈರಸ್ ಹರಡುವುದನ್ನು ತಡೆಯಲು ತಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾತನಾಡಿದ್ದೇವೆ. ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ನಾವು ನೈಟ್ ಕರ್ಫ್ಯೂ ವಿಧಿಸಿದ್ದೇವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : Lord Hanuman Birth Place: ಅಂಜನೇಯ ಸ್ವಾಮಿ ಜನ್ಮಸ್ಥಾನದ ಕುರಿತು ಮುಖಾಮುಖಿಯಾದ ಕರ್ನಾಟಕ-ಆಂಧ್ರಪ್ರದೇಶ


ಸಾರ್ವಜನಿಕರು ಮಾಸ್ಕ್(Face Mask) ಧರಿಸಿ ಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಮತ್ತು ಸಾಮಾಜಿಕ ಅಂತರವನ್ನ ಕಾಪಾಡಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದರು.


“ಜನರು ತಮ್ಮ ಒಳಿತಿಗಾಗಿ ಪ್ರತಿಕ್ರಿಯಿಸಬೇಕಾಗಿದೆ. ಅವರು ಸಹಕರಿಸದಿದ್ದರೆ ನಾವು ಕಠಿಣ ಕ್ರಮಗಳನ್ನು ಕೈಗಿಳ್ಳಬೇಕಾಗುತ್ತದೆ, ಜನರು ಇದಕ್ಕೆ ಅವಕಾಶ ನೀಡಬಾರದು. ಜನರು ನಮ್ಮೊಂದಿಗೆ ಸಹಕರಿಸಬೇಕೆಂದು ನಾನು ಬಯಸುತ್ತೇನೆ ”ಎಂದು ಹೇಳಿದರು.


ಇದನ್ನೂ ಓದಿ : DK Shivakumar: ಮಸ್ಕಿ ಬಿಜೆಪಿ ಅಭ್ಯರ್ಥಿಯನ್ನ ಅನರ್ಹಗೊಳಿಸಲು ಕಾಂಗ್ರೆಸ್ ಶತ ಪ್ರಯತ್ನ..!


ಲಾಕ್‌ಡೌನ್ ಮಾಡುವೆ ಕುರಿತು ಮರುಪರಿಶೀಲಿಸುವಂತೆ ತಾಂತ್ರಿಕ ಸಲಹಾ ಸಮಿತಿಗೆ ಶಿಫಾರಸು ಮಾಡಲಾಗಿದೆಯೇ ಎಂದು ಕೇಳಿದಾಗ, ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ಸಹಕರಿಸಬೇಕು ಎಂದು ಹೇಳಿದರು.


ಈ ಕುರಿತು ಪ್ರತಿಕ್ರಿಯೆಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್(Dr K Sudhakar), ಲಾಕ್ ಡೌನ್ ವಿಧಿಸಲು ಸರ್ಕಾರ ಆಸಕ್ತಿ ತೋರಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ : Bus Strike: ಐದನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಇದಕ್ಕೆ ಸರ್ಕಾರದ ಅಭಿಪ್ರಾಯವೇನು?


"ಸಿಎಂ ಮತ್ತೆ ನಾವು ಲಾಕ್ ಡೌನ್(Lockdown) ಮಾಡುತ್ತೇವೆ ಎಂದು ಹೇಳುತ್ತಿಲ್ಲ. ಅದನ್ನ ಮಾಡುವ  ಪರಸ್ಥಿತಿಯನ್ನ ನೀವು ಸೃಷ್ಠಿ ಮಾಡಬೇಡಿ. ಲಾಕ್‌ಡೌನ್ ವಿಧಿಸಲು ನಮ್ಮ ಸರ್ಕಾರ ಸಿದ್ದವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ಕರೋನವೈರಸ್ ಎರಡನೇ ಅಲೆಯನ್ನ ಜನರ ಸಹಕಾರದಿಂದ ನಾವು ಹೊಡೆದೋಡಿಸಬಹುದು ಎಂದು ಸುಧಾಕರ್ ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.