ಬೆಂಗಳೂರು: ರಾಜಕೀಯವಾಗಿ ಸದಾ ಬದ್ಧ ವೈರಿಗಳಂತೆ ಕಾಣುವ ಹಾಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಇಂದು ಭೇಟಿಯಾಗಿ ಚರ್ಚೆ ನಡೆಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.


COMMERCIAL BREAK
SCROLL TO CONTINUE READING

ಇಂದು ಬೆಳಿಗ್ಗೆ ದಿಢೀರನೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಕ್ಕೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಎಚ್​.ಡಿ‌. ಕುಮಾರಸ್ವಾಮಿ, ಅಭಿವೃದ್ಧಿ ಕೆಲಸದ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಭೇಟಿಯಾಗಿದ್ದೇನೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಹೇಳಿದರು. ಆದರೂ ಇವರಿಬ್ಬರ ಭೇಟಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ.


ಹೆಚ್.ಡಿ.ಕುಮಾರಸ್ವಾಮಿ ಊಸರವಳ್ಳಿಯಂತೆ ಆಗಾಗ ಬಣ್ಣಬದಲಾಯಿಸುತ್ತಾರೆ: ಬಿ.ಸಿ. ಪಾಟೀಲ್


ಕಳೆದ ಎರಡು ದಿನದಿಂದ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಸಾಕಷ್ಟು ಮಳೆ ಆಗಿತ್ತು. ಜೆಡಿಎಸ್ ಶಾಸಕ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲೂ ಅಪಾರ ಪ್ರಮಾಣದ ಹಾನಿ ಆಗಿತ್ತು. ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಆ ಕ್ಷೇತ್ರಕ್ಕೆ 515 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಅನುಮೋದನೆ ಕೊಟ್ಟಿದ್ದೆ. ಆದರೆ ಈಗ ರಾಜ್ಯ ಸರ್ಕಾರ ಕೇವಲ 16 ಕೋಟಿ ‌ರೂಪಾಯಿ ಬಿಡುಗಡೆ ಮಾಡಿದೆ. 


ಡ್ರಗ್ಸ್ ಮಾಫಿಯಾದಲ್ಲಿ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತ: ಬಿಜೆಪಿ ಕುಮ್ಮಕ್ಕಿನಿಂದಲೇ ನಡೆಯುತ್ತಿದೆಯಾ ಡ್ರಗ್ಸ್ ಧಂಧೆ?


ಈಗ ಮಳೆಯಿಂದಲೂ ಅನಾಹುತ ಆಗಿರುವುದರಿಂದ ಕೂಡಲೇ ಬಾಕಿ‌ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳಲು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ತಮ್ಮ ಪಕ್ಷದ ಶಾಸಕರೊಬ್ಬರ ಕ್ಷೇತ್ರದ ಕೆಲಸಕ್ಕಾಗಿ ಮಾತ್ರವೇ ಕುಮಾರಸ್ವಾಮಿ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರಾ? ಎನ್ನುವ ಅನುಮಾ‌ನ‌ ಇದ್ದೇ ಇದೆ.


ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುತ್ತಾರೆ ಎಂಬ ವಿಷಯ ಚರ್ಚೆ ಆಗುತ್ತಿರುವ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಭೇಟಿಯಾಗಿರುವುದು ಕುತೂಹಲವನ್ನು‌ ಇನ್ನಷ್ಟು ಹೆಚ್ಚಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಅಭಿವೃದ್ಧಿ ಕಾರ್ಯಕ್ಕೆ ಭೇಟಿ ಆಗಿದ್ದೇನಷ್ಟೇ ಎಂದು ಹೇಳಿದ್ದಾರೆ.