ಬೆಂಗಳೂರು: ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಶಿವಮೊಗ್ಗಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ(BS Yediyurappa), ಬೆಳಗಾವಿ ಲೋಕಸಭಾ, ಮಸ್ಕಿ, ಬಸವಕಲ್ಯಾಣ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದೇ ಗೆಲ್ಲಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.


Congress Rally : ಸ್ವಾರಸ್ಯಕರವಾಗಿದೆ `ಕನಕಪುರದ ಬಂಡೆ'ಗೆ ಡಿಕೆಶಿ ಕೊಟ್ಟ ವ್ಯಾಖ್ಯಾನ..!


ಯಾವುದೇ ಸಂದರ್ಭದಲ್ಲೂ ಉಪಚುನಾವಣೆ(Byelection 2021) ಎದುರಾದರೂ ನಾವು ಸಿದ್ಧರಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆ ಎಂದರು.ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತೀರಾ ಎಂಬ ಮಾಧ್ಯಮವರ ಪ್ರಶ್ನೆಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.


GESCOM JOBS : ಜೆಸ್ಕಾಂನಲ್ಲಿ 205 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಮುಂದಿನ ಬಜೆಟ್(Karnataka Budget 2021) ಮಂಡನೆಗೆ ಸಂಬಂಸಿದಂತೆ ಎಲ್ಲ ಚರ್ಚೆ ಮುಗಿದಿದೆ. ಶಿವಮೊಗ್ಗ ಪ್ರವಾಸ ಕೈಗೊಂಡಿದ್ದು, ಸೊರಬ ತಾಲ್ಲೂಕಿನಲ್ಲಿ ಕಾರ್ಯಕ್ರಮ ಇದೆ. ಸೊರಬದಿಂದ ಶಿವಮೊಗ್ಗಕ್ಕೆ ಬಂದು ಸಮಾರಂಭದಲ್ಲಿ ಭಾಗವಹಿಸುತ್ತೇನೆ. ಪ್ರವಾಸದಿಂದ ಮರಳಿ ನಾಳೆ ಬಜೆಟ್ ಸಿದ್ಧತೆ ಅಂತಿಮಗೊಳಿಸುವುದಾಗಿ ಮಾಹಿತಿ ನೀಡಿದರು.


Sanjeev Kumar: ಬೈಎಲೆಕ್ಷನ್ ಬಗ್ಗೆ 'ಮಹತ್ವದ ಮಾಹಿತಿ' ನೀಡಿದ ಮುಖ್ಯ ಚುನಾವಣಾಧಿಕಾರಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.