ಬೆಂಗಳೂರು : ರಾಜ್ಯದಲ್ಲಿ ಜೂನ್ 7 ರ ನಂತರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಲಾಕ್ ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಪೌರ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ(BS Yediyurappa), ಜೂನ್ 5 ಅಥವಾ 6 ರಂದು ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಆದರಣೀಯ ಪ್ರಧಾನಮಂತ್ರಿ ಶ್ರೀ @narendramodi ರವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಪೂರೈಸಿರುವ ಸಂದರ್ಭವನ್ನು ಸೇವಾಕಾರ್ಯಗಳ ಮೂಲಕ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ @BSYBJP ರವರು ಇಂದು ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಪೌರಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ಗಳನ್ನು ವಿತರಿಸಿದರು. @PMOIndia pic.twitter.com/fCRy9q8ivU
— CM of Karnataka (@CMofKarnataka) May 30, 2021
ಇದನ್ನೂ ಓದಿ : Heavy Rainfall : ರಾಜ್ಯದಲ್ಲಿ ಇಂದಿನಿಂದ 5 ದಿನಗಳವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ!
ಜನ ಸಹಕರಿಸಿದರೆ ಲಾಕ್ ಡೌನ್ ವಿಸ್ತರಿಸುವ(Lockdown Extension) ಅಗತ್ಯವಿಲ್ಲ. ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಡಿಮೆಯಾಗಿಲ್ಲ. ಈ ಬಗ್ಗೆ ತಜ್ಞರು, ಸಚಿವರ ಜತೆ ಸಮಾಲೋಚನೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ : ಕೊರೊನಾ ಲಸಿಕೆ ಹಗರಣ: ಹೈಕೋರ್ಟ್ ಮಧ್ಯಸ್ಥಿಕೆಗೆ ಕಾಂಗ್ರೆಸ್ ಆಗ್ರಹ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ