ರಾಯಚೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಆದರೆ, ಇಂತಹ ಹೇಳಿಕೆಗಳನ್ನು ತಳ್ಳಿಹಾಕಿರುವ ಬಿಎಸ್ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ತಮ್ಮ ಪುತ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಿಂಧನೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ(BS Yediyurappa), ಮೈಸೂರಿನಲ್ಲಿಯೇ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ ಅಲ್ಲಿ ಮನೆ ಮಾಡಿಕೊಳ್ಳಲಿದ್ದಾರೆ. ಅಲ್ಲಿದ್ದುಕೊಂಡು ಸುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಕೆಲಸ ಮಾಡಲಿದ್ದಾರೆ ಎಂದರು.


ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣ : ಹೊರಗುತ್ತಿಗೆ ವೈದ್ಯರು ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ


ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ(BJP) ಈಗಾಗಲೇ ಗೆದ್ದಾಗಿದೆ. ಬೆಳಗಾವಿಯಲ್ಲಿ ಗೆಲ್ಲುವ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ಯಡಿಯೂರಪ್ಪ ಹೇಳಿದರು.


ಇದೇ ವೇಳೆ ಉಪ ಚುನಾವಣೆ(By Election) ಬಳಿಕ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂಬ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು.


ಉಪ ಚುನಾವಣಾ ಸಮರ : ಎರಡು ದಿನಗಳಲ್ಲಿ ಬಿಜೆಪಿ ಪಟ್ಟಿ ರಿಲೀಸ್ ಸಂಭವ


ದೇಶದಲ್ಲಿ ಮೊದಲ ಬಾರಿಗೆ ತೆರಿಗೆ ಹಾಕದೆಯೇ ಬಜೆಟ್(Budget 2021) ಮಂಡಿಸಲಾಗಿದೆ. ಎಲ್ಲಾ ವರ್ಗಕ್ಕೂ ಅಗತ್ಯ ಸಹಕಾರ ನೀಡಲಾಗುವುದು ಎಂದು ಇದೇ ವೇಳೆ ಯಡಿಯೂರಪ್ಪ ಭರವಸೆ ನೀಡಿದರು.


ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿಕೊಂಡಿದ್ದು, ಉಪ ಚುನಾವಣೆಗಳಲ್ಲಿ ಪಕ್ಷದ ಕೈ ಹಿಡಿಯಲಿದ್ದಾರೆ ಎಂದು ಸಿಎಂ ಭರವಸೆ ವ್ಯಕ್ತಪಡಿಸಿದರು.


Government Employees: ರಾಜ್ಯ ಸರ್ಕಾರಿ ನೌಕರರಿಗೊಂದು ಮಾಹಿತಿ: ‘KGID Online' ಬಳಕೆ ಹೇಗೆ ಗೊತ್ತಾ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.