ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಕರೋನಾವೈರಸ್ ಎರಡನೇ ಅಲೆಯ ಅಬ್ಬರ ಜೋರಾಗಿದೆ. ಇನ್ನೊಂದೆಡೆ ದೇಶಾದ್ಯಂತ ಇಂದಿನಿಂದ ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೂ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದ್ದು ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa), ನಾಗರಿಕ ಬಂಧುಗಳೇ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. ಎಲ್ಲ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಇಂದಿನಿಂದ ಲಸಿಕೆ ಪಡೆಯಬಹುದು, ನಿಮ್ಮ ಹತ್ತಿರದ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳಿ. ಜೊತೆಯಾಗಿ ನಾವೆಲ್ಲರೂ ಕೊರೋನಾ ಹಿಮ್ಮೆಟ್ಟಿಸೋಣ ಎಂದು ಕರೆ ನೀಡಿದ್ದಾರೆ.
ನಾಗರಿಕ ಬಂಧುಗಳೇ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. ಎಲ್ಲ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಇಂದಿನಿಂದ ಲಸಿಕೆ ಪಡೆಯಬಹುದು, ನಿಮ್ಮ ಹತ್ತಿರದ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳಿ. ಜೊತೆಯಾಗಿ ನಾವೆಲ್ಲರೂ ಕೊರೋನಾ ಹಿಮ್ಮೆಟ್ಟಿಸೋಣ.
— B.S. Yediyurappa (@BSYBJP) April 1, 2021
ಬೆಂಬಿಡದೆ ಕಾಡುತ್ತಿರುವ ಕರೋನಾವೈರಸ್ ಎಂಬ ಮಹಾಮಾರಿಯನ್ನು ನಿರ್ಮೂಲನೆ ಮಾಡಲು ದೇಶಾದ್ಯಂತ ಈಗಾಗಲೇ ಕೊರೊನಾ ಲಸಿಕೆ (Corona Vaccine) ಅಭಿಯಾನ ನಡೆಯುತ್ತಿದ್ದು ಇದುವರೆಗೆ ಕೊರೊನಾ ವಾರಿಯರ್ಸ್, 60 ವರ್ಷ ಮೇಲ್ಪಟ್ಟವರು ಹಾಗೂ ಅನಾರೋಗ್ಯಪೀಡಿತರಿಗೆ ಲಸಿಕೆ ನೀಡಲಾಗಿತ್ತು. ಆದರೆ ಇಂದಿನಿಂದ 45 ವರ್ಷ ಮೇಲ್ಪಟ್ಟ ಪ್ರತಿ ನಾಗರೀಕರಿಗೂ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಇದನ್ನೂ ಓದಿ - HD Devegowda: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ದಂಪತಿ ಆಸ್ಪತ್ರೆಗೆ ದಾಖಲು..!
ವಾಸ್ತವವಾಗಿ ದೇಶಾದ್ಯಂತ ಇಂದಿನಿಂದ ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾಗಲಿದ್ದು ಎರಡು ವಾರದೊಳಗೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿತ್ತು.
ಇದನ್ನೂ ಓದಿ - ರಾಜ್ಯದಲ್ಲಿ ಶೇ 42 ರಷ್ಟು ಕೊರೊನಾ ಪ್ರಕರಣಗಳ ಹೆಚ್ಚಳ, 4,200 ಕ್ಕೆ ದೈನಂದಿನ ಏರಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕರೋನಾವೈರಸ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸೂಚನೆ ಅನ್ವಯ ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ನಾಗರೀಕರು ನೇರವಾಗಿ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯಬಹುದಾಗಿದೆ.