BS Yediyurappa: ಹುಟ್ಟುಹಬ್ಬದ ದಿನ ರಾಜಹುಲಿ ಮನೆ ಮುಂದೆ ನಿಂತ ಘರ್ಜಿಸುವ ಸಿಂಹ..!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 78 ವರ್ಷ ಕಳೆದು 79ನೇ ವಸಂತಕ್ಕೆ ಕಾಲಿಟ್ಟರು.

Last Updated : Feb 27, 2021, 04:16 PM IST
  • ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 78 ವರ್ಷ ಕಳೆದು 79ನೇ ವಸಂತಕ್ಕೆ ಕಾಲಿಟ್ಟರು.
  • ಈ ಜನ್ಮ ದಿನದಂದು ಸಿಎಂ ಬಿಎಸ್‌ವೈ ನಿವಾಸದ ಮುಂದೆ ಸಿಂಹ ನಿಂತಿದೆ.
  • ಸಿಎಂ ಸರ್ಕಾರಿ ನಿವಾಸ ಕಾವೇರಿ ಮುಂಭಾಗದ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಮೇಕ್ ಇನ್ ಇಂಡಿಯಾ ಸಿಂಹ ಲಾಂಛನವನ್ನು ಪ್ರತಿಷ್ಠಾಪಿಸಲಾಗಿದೆ
BS Yediyurappa: ಹುಟ್ಟುಹಬ್ಬದ ದಿನ ರಾಜಹುಲಿ ಮನೆ ಮುಂದೆ ನಿಂತ ಘರ್ಜಿಸುವ ಸಿಂಹ..! title=

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 78 ವರ್ಷ ಕಳೆದು 79ನೇ ವಸಂತಕ್ಕೆ ಕಾಲಿಟ್ಟರು. ಈ ಜನ್ಮ ದಿನದಂದು ಸಿಎಂ ಬಿಎಸ್‌ವೈ ನಿವಾಸದ ಮುಂದೆ ಸಿಂಹ ನಿಂತಿದೆ.

ಸಿಎಂ ಸರ್ಕಾರಿ ನಿವಾಸ ಕಾವೇರಿ ಮುಂಭಾಗದ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಮೇಕ್ ಇನ್ ಇಂಡಿಯಾ ಸಿಂಹ(Make in India Lion) ಲಾಂಛನವನ್ನು ಪ್ರತಿಷ್ಠಾಪಿಸಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಮೇಕ್ ಇನ್ ಇಂಡಿಯಾ ಲಾಂಛನವನ್ನು ಲೋಕಾರ್ಪಣೆ ಮಾಡಿದರು.

Karnataka Bandh: ಮಾರ್ಚ್‌ 27 ಕ್ಕೆ 'ಕರ್ನಾಟಕ ಬಂದ್'..!

ಇನ್ನು ಈ ಪ್ರತಿಮೆ(Lion statue)ಯು 1,140 ಕೆಜಿ ತೂಕವಿದ್ದು, 23 ಅಡಿ ಉದ್ದ, 4.5 ಅಡಿ ಅಗಲವಿದೆ. 10 ಅಡಿ ಎತ್ತರವಿದೆ.

ಲಾಂಛನ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ(BS Yediyurappa), ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯನ್ನು ಅನಾವರಣಗೊಳಿಸುವ ಈ ಲಾಂಛನವನ್ನು ಸ್ಥಾಪಿಸುವುದು ಅತ್ಯಂತ ಅರ್ಥಪೂರ್ಣವಾಗಿದೆ. ವಿಶ್ವಮಾರುಕಟ್ಟೆಯಲ್ಲಿ ಬ್ರಾಂಡ್ ಕರ್ನಾಟಕವನ್ನು ಸ್ಥಾಪಿಸಲು ನಮ್ಮ ಸರ್ಕಾರ ಅಭಿವೃದ್ಧಿಪಡಿಸುವ ಮಹಾತ್ವಾಕಾಂಕ್ಷೆಯನ್ನು ಹೊಂದಿದೆ. ಮೇಕ್ ಇನ್ ಇಂಡಿಯಾ ಸಾಕಾರಕ್ಕೆ ಹೂಡಿಕೆದಾರ ಸ್ನೇಹಿ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

CP Yogeshwar: ಕುಮಾರಸ್ವಾಮಿ ಬಗ್ಗೆ 'ಹೊಸ ಬಾಂಬ್' ಸಿಡಿಸಿದ ಸಚಿವ ಯೋಗೀಶ್ವರ್!

ಕೈಗಾರಿಕಾ ಕ್ಷೇತ್ರದಲ್ಲಿ ರಾಜ್ಯದ ಕೊಡುಗೆಯನ್ನು ಶೇಕಡಾ 20ಕ್ಕೆ ಹೆಚ್ಚಿಸಲು ಆದ್ಯತೆ ನೀಡಲಾಗುವುದು. ಇದರಲ್ಲಿ ಬಹುಪಾಲು ಬೆಂಗಳೂರು(Bengaluru) ನಗರದ್ದೇ ಆಗಿದೆ. ಬೆಂಗಳೂರು ನಗರದಲ್ಲಿ ದೊಡ್ಡ ಮತ್ತು ಸಣ್ಣ ಕೈಗಾರಿಕೆ ಅಭಿವೃದ್ಧಿ, ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉಪಕರಣ, ದೂರಸಂಪರ್ಕ, ವೈಮಾನಿಕ ಕೈಗಾರಿಕೆ, ಔಷಧಿ ತಯಾರಿಕೆ, ಜೈವಿಕ ವಿಜ್ಞಾನ, ಆಹಾರ ಸಂಸ್ಕರಣೆ, ಆಟೋ ಮೊಬೈಲ್ ಉದ್ಯಮಗಳ ನೆಲೆ ಬೆಂಗಳೂರು ಆಗಿದೆ. ಇಂತಹ ವಿಶ್ವವಿಖ್ಯಾತ ಬೆಂಗಳೂರು ನಗರವನ್ನು ವಿಶ್ವವಿಖ್ಯಾತಗೊಳಿಸಲು ಬೆಂಗಳೂರು ಮಿಷನ್-2020ನ್ನು ನಮ್ಮ ಸರ್ಕಾರ ರೂಪಿಸಿದೆ ಎಂದರು.

ಖಾಕಿ, ಸಿಸಿಟಿವಿ ಕಣ್ಗಾವಲಿನ ನಡುವೆ ನಾಳೆ FDA Exam.! ಅತೀ ಅಗತ್ಯ ಮಾಹಿತಿ ಇಲ್ಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News