ಬೆಂಗಳೂರು: ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮುಖ್ಯಮಂತ್ರಿ ಬಿಎಸ್‌ವೈ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿರುವ ರೇಣುಕಾಚಾರ್ಯ(MP Renukacharya) ಅವರು ದೆಹಲಿಗೆ ಹಾರಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸೋತವರಿಗೂ ಕ್ಯಾಬಿನೆಟ್ ಮಿನಿಸ್ಟರ್ ಮಾಡಿರುವ ಬಗ್ಗೆ ಕೇಂದ್ರ ನಾಯಕರಿಗೆ ದೂರು ನೀಡಿದ್ದಾರೆ.


B.Sriramulu: ಟ್ವಿಟ್ಟರ್‌ನಲ್ಲಿ ಸೌಮ್ಯ ರೆಡ್ಡಿ v/s ಶ್ರೀರಾಮುಲು ಜಟಾಪಟಿ..!


ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸಿಎಂ ಬಿಎಸ್ ಯಡಿಯೂರಪ್ಪ ಅವರು ರೇಣುಕಾಚಾರ್ಯ ಅವರ ಕ್ಷೇತ್ರವಾದ ಹೊನ್ನಾಳಿಗೆ ಸುಮಾರು 48 ಕೋಟಿ ರೂ ಅನುದಾನ ಬಿಡುಗಡೆ ಮಾಡಲು ಸಿಎಂ ನಿರ್ಧರಿಸಿದ್ದಾರೆ. ಈ ಮೂಲಜ ರೇಣುಕಾಚಾರ್ಯ ಕೋಪವನ್ನು ತಣ್ಣಗಾಗಿಸಲು ಸಿಎಂ ಈ ಸೂತ್ರ ಬಳಸಿದ್ದಾರೆ.


Siddaganga Swamiji: ಸಿದ್ಧಗಂಗಾಶ್ರೀಗಳ ಪುಣ್ಯಸ್ಮರಣೆ ದಿನ 'ದಾಸೋಹ ದಿನ'ವನ್ನಾಗಿ ಆಚರಣೆ: ಸಿಎಂ ಬಿಎಸ್ ವೈ


ಕ್ಷೇತ್ರಕ್ಕೆ 48 ಕೋಟಿ ರೂ. ಬಿಡುಗಡೆಗೆ ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಆಗಲಿದೆ. ಹೊನ್ನಾಳಿ ಕ್ಷೇತ್ರದ 19 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಕಾಮಗಾರಿಗೆ ಹಣ ಬಿಡುಗಡೆ ಆಗುವ ಸಾದ್ಯತೆ ಇದೆ.


Ration Card: ಖಾತೆ ಹಂಚಿಕೆ ಬೆನ್ನಲ್ಲೇ 'ಪಡಿತರ ಚೀಟಿ'ದಾರರಿಗೆ 'ಸಿಹಿ ಸುದ್ದಿ' ನೀಡಿದ ಉಮೇಶ್ ಕತ್ತಿ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G 
Apple Link - https://apple.co/3hEw2hy 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.