ಬೆಂಗಳೂರು: ಈ ಹಿಂದೆ ಇದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಯೋಜನೆ ಬಗ್ಗೆ ತನಿಖೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೃಷಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಎರಡು ತಿಂಗಳುಗಳಲ್ಲಿ ವರದಿ ನೀಡುವಂತೆ  ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.


ಕೃಷಿ ಭಾಗ್ಯ ಯೋಜನೆಗೆ ಸರ್ಕಾರ 921.2 ಕೋಟಿ ರೂ. ಖರ್ಚು ಮಾಡಿದ್ದು, 2017-18ರ ಅವಧಿಯಲ್ಲಿ ಕೃಷಿ ಯೋಜನೆ ಅಡಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.