ಬೆಂಗಳೂರು : ನಾವು ಪ್ಯಾಕೇಜ್ ಘೋಷಣೆ ಮಾಡಿದ್ದೇವೆ. ಮಾಧ್ಯಮಗಳಲ್ಲಿ ಯಾವಾಗ ಹಣ ಬಿಡುಗಡೆ ಎಂದು ಕೇಳ್ತಿದ್ರು. ಇವತ್ತು ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಹಣ ರಿಲೀಸ್ ಮಾಡಿದ್ದೇವೆ. ಒಟ್ಟು 25 ಲಕ್ಷ ಕಾರ್ಮಿಕರಿಗೆ ಹಣ ವರ್ಗಾವಣೆ ಮಾಡ್ತಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ(BS Yediyurappa), ಒಟ್ಟು 749 ಕೋಟಿ ಹಣ ಬಿಡುಗಡೆ ಮಾಡ್ತಿದ್ದೇವೆ. 4 ಲಕ್ಷ ಜನರಿಗೆ ಇಂದು 110 ಕೋಟಿ ರಿಲೀಸ್ ಮಾಡಿದ್ದೇವೆ. ಅಸಂಘಟಿತ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Karnataka Lockdown Relaxation : ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್ವೈ!
ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ(SSLC) ಅಂಕಗಳನ್ನು ಆಧರಿಸಿ ಗ್ರೇಡ್ ವಿಚಾರವಾಗಿ ಮಾತನಾಡಿದ ಅವರು, ಇವೆಲ್ಲದರ ಬಗ್ಗೆ ಚರ್ಚೆ ನಡೆದಿದೆ. ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ. ಪರೀಕ್ಷೆಯನ್ನು ಜುಲೈನಲ್ಲಿ ಮಾಡಲು ಸಚಿವರು ಯೋಚಿಸ್ತಿದ್ದಾರೆ. ಕೆಲವರು ಪರೀಕ್ಷೆ ವಿರೋಧಿಸುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲದರ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ದ್ವಿತೀಯ PUC ಫಲಿತಾಂಶಕ್ಕೆ SSLC ಅಂಕವೂ ಪರಿಗಣನೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ