ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್  ನಿಧನ ದುಃಖ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



COMMERCIAL BREAK
SCROLL TO CONTINUE READING

ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ , ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.


ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೋಕನಾಥ್ ನಿನ್ನೆ ರಾತ್ರಿ 12.15ಕ್ಕೆ ಕೊನೆಯುಸಿರೆಳೆದ್ದಾರೆ. ಮಧ್ಯಾಹ್ನ 12 ಗಂಟೆಯಿಂದ 2:30ರವರೆಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.