ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಅಣೆಕಟ್ಟೆಗಳೂ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಹೆಚ್.ಡಿ.ಕುಮಾರ ಸ್ವಾಮಿ ಸೂಚನೆ ನೀಡಿದ್ದಾರೆ. 


ಕಳೆದ ಕೆಲ ದಿನಗಳಿಂದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳೂ ಭರ್ತಿಯಾಗುತ್ತಿವೆ. ಅಲ್ಲದೆ, ಕೇರಳದ ವೈನಾಡಿನಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು. ಕಬಿನಿ ಜಲಾಶಯ ಭರ್ತಿಯಾಗಿದೆ. ಕಬಿನಿ ಜಲಾಶಯದ ನೀರಿನ ಮಟ್ಟ ಸೋಮವಾರ 2,263 ಅಡಿಗಳಷ್ಟು ತಲುಪಿದ್ದು, ಪೂರ್ತಿ ಭರ್ತಿಯಾಗಲು ಕೇವಲ 21 ಅಡಿ ಬಾಕಿಯಿದೆ. ಇನ್ನೂ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.40 ಅಡಿ ತಲುಪಿದ್ದು, ಭರ್ತಿಯಾಗಲು ಕೇವಲ 14 ಅಡಿಗಳು ಬಾಕಿ ಇದೆ.