'ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ'

 ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Written by - Zee Kannada News Desk | Last Updated : Apr 10, 2022, 08:05 PM IST
  • ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ.
  • ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ.
'ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ' title=

ಬೆಂಗಳೂರು: ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು,ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ.  

ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?

ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದಿರುವ ದೌರ್ಜನ್ಯವೂ ಆಗಿದೆ.ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ.

ಇದನ್ನೂ ಓದಿ: ಸಾಹಿತಿಗಳ ಕೂದಲು ಮುಟ್ಟಲು ಕಾಂಗ್ರೆಸ್ ಬಿಡುವುದಿಲ್ಲ.- ಬಿ ಕೆ ಹರಿಪ್ರಸಾದ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ, ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ.

ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ.

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ.

ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ.ಇದನ್ನು ಕನ್ನಡಿಗರು ಎಂದೂ ಕ್ಷಮಿಸರು.

ಇದನ್ನೂ ಓದಿ: ಹಿಂದಿ ಹೇರಿಕೆಗೆ ಮುನ್ನುಡಿ ಬರೆದಿದ್ದೇ ಕಾಂಗ್ರೆಸ್: ಜೆಡಿಎಸ್

ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ.ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ.

ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮ್‌ದಾರ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದು ಕಳವಳಕಾರಿ ಬೆಳವಣಿಗೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ.ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News