ಸುಮಲತಾ ವಿರುದ್ಧ ಅವಹೇಳನಕಾರಿ ಹೇಳಿಕೆ; ರೇವಣ್ಣ ಪರವಾಗಿ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚನೆ

ಸುಮಲತಾ ಅಂಬರೀಶ್ ವಿರುದ್ಧ ಸಚಿವ ರೇವಣ್ಣ ಅವರು ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕ್ಷಮೆಯಾಚಿಸಿದ್ದಾರೆ.

Last Updated : Mar 10, 2019, 12:08 PM IST
ಸುಮಲತಾ ವಿರುದ್ಧ ಅವಹೇಳನಕಾರಿ ಹೇಳಿಕೆ; ರೇವಣ್ಣ ಪರವಾಗಿ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚನೆ title=

ಬೆಂಗಳೂರು: ಸುಮಲತಾ ಅಂಬರೀಶ್ ವಿರುದ್ಧ ಸಚಿವ ರೇವಣ್ಣ ಅವರು ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕ್ಷಮೆಯಾಚಿಸಿದ್ದಾರೆ.

ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, "ರೇವಣ್ಣ ಆ ರೀತಿ ಹೇಳಿಕೆ ನೀಡಲು ಮಾಧ್ಯಮದವರ ಪ್ರಸಹನೆಯೇ ಕಾರಣ. ಆದರೆ ರೇವಣ್ಣ ಎಚ್ಚರಿಕೆಯಿಂದ ಉತ್ತರ ಕೊಡಬೇಕಿತ್ತು ಅಷ್ಟೇ. ನಮ್ಮ ಕುಟುಂಬ ಇದುವರೆಗೂ ಯಾವ ಹೆಣ್ಣು ಮಕ್ಕಳಿಗೂ ಅವಮಾನ ಮಾಡಿಲ್ಲ. ಅವರು ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ" ಎಂದು ಹೇಳಿದ್ದಾರೆ.

ಸುಮಲತಾ ರಾಜಕೀಯ ಪ್ರವೇಶದ ಬಗ್ಗೆ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಸಚಿವ ಹೆಚ್.ಡಿ.ರೇವಣ್ಣ ಅವರು, "ಗಂಡ ಸತ್ತು ಆರು ತಿಂಗಳೂ ಆಗಿಲ್ಲ, ಅವರಿಗೆ ಚುನಾವಣೆ ಬೇಕಾ?" ಎಂದು ಪ್ರಶ್ನಿಸಿ, ಸುಮಲತಾ ಕಣ್ಣೀರು ಹಾಕಿ ಡ್ರಾಮಾ ಮಾಡುತ್ತಿರಬಹುದು ಎಂದಿದ್ದರು. ಈ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
 

Trending News