ಬೆಂಗಳೂರು: ಮಖ್ಯಮಂತ್ರಿ ಹೆ ಚ್. ಡಿ.ಕುಮಾರಸ್ವಾಮಿ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಡಿಸೆಂಬರ್ 26 ಮತ್ತು 27 ರಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ.  


COMMERCIAL BREAK
SCROLL TO CONTINUE READING

ಡಿಸೆಂಬರ್ 26 ರಂದು  ಕೇಂದ್ರ ಜಲಸಂಪನ್ಮೂಲ, ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದ  ಹೆದ್ದಾರಿ ಹಾಗೂ ನೀರಾವರಿ ಯೋಜನೆಗಳ  ಬಗ್ಗೆ ಮಾತುಕತೆ ನಡೆಸಲಿದ್ದಾರೆ.


ಡಿಸೆಂಬರ್ 27 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿಯಾಗಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ  ಮನವಿ ಸಲ್ಲಿಸುವರು. ಬಳಿಕ ಕೇಂದ್ರ ರೈಲ್ವೆ ಹಾಗೂ ಕಲ್ಲಿದ್ದಲು ಖಾತೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯದ ಕಲ್ಲಿದ್ದಲು ಬಗ್ಗೆ ಚರ್ಚಿಸುವರು.