ನವದೆಹಲಿ: ರಾಜ್ಯದಲ್ಲಿ ಕಾಡುತ್ತಿರುವ ಬರಕ್ಕೆ ಪರಿಹಾರ ಕೇಳಲು ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. 


COMMERCIAL BREAK
SCROLL TO CONTINUE READING

ಇದಲ್ಲದೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ  ಮನವಿ ಸಲ್ಲಿಸುವರು. 


ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಶಿಫಾರಸು



ಕೇಂದ್ರ ರೈಲ್ವೆ ಹಾಗೂ ಕಲ್ಲಿದ್ದಲು ಖಾತೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ  ಕಲ್ಲಿದ್ದಲು ಪೂರೈಸುವ ಬಗ್ಗೆ ಚರ್ಚಿಸುವರು.


ಅದೇ ರೀತಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮಯ ಕೇಳಿದ್ದಾರೆ.