ಬೆಂಗಳೂರು: ಗಣಿಗಳ ಆಧುನೀಕರಣಕ್ಕೆ ಉನ್ನತ ಮಟ್ಟದ ಸಮಿತಿಯನ್ನು ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸೂಚಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Green Tea ಅಷ್ಟೇ ಅಲ್ಲ Green Coffee ಕೂಡ ಮೇಣದಂತೆ ಬೊಜ್ಜು ಕರಗಿಸುತ್ತದೆ
ವಿವಿಧ ದೇಶಗಳಲ್ಲಿ ಗಣಿಗಾರಿಕೆಯ ಪರಿಕಲ್ಪನೆ, ಯಂತ್ರೋಪಕರಣ ಹಾಗೂ ಖನಿಜಾನ್ವೇಷಣೆಯಲ್ಲಿ ಆಧುನೀಕರಣವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಗಂಭೀರವಾಗಿ ಚಿಂತನೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸಬೇಕು ಎಂದು ಸಿಎಂ ಸೂಚಿಸಿದರು.
ಮರಳು ನೀತಿ : ಬಡವರು ಮತ್ತು ಮಧ್ಯಮ ವರ್ಗದವರಿಗೆ ಸಹಾಯವಾಗುವಂತೆ ಮರಳು ನೀತಿಯನ್ನು ತಿದ್ದುಪಡಿ ಮಾಡಬೇಕು. ಅಷ್ಟೇ ಅಲ್ಲದೆ, ಕೆಲವರ ಕೈಯಲ್ಲಿರುವ ಮರಳು ಗಣಿಗಾರಿಕೆಯನ್ನು ಮುಕ್ತಗೊಳಿಸುವ ಅಗತ್ಯವಿದೆ ಎಂದರು.
ಇದನ್ನೂ ಓದಿ: ಖಾಸಗಿ ಬ್ಯಾಂಕ್ ಗಳಲ್ಲಿಯೇ NRIಗಳು ಹೂಡಿಕೆ ಮಾಡಲು ಕಾರಣವೇನು? ಇಲ್ಲಿದೆ ನೋಡಿ ಉತ್ತರ
ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಎಂಎಸ್ಎಂಇ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.