ಕೊಡಗಿಗೆ ನೆರವು ಕೇಳಲು ಸಿಎಂ ಹೆಚ್ಡಿಕೆ ನಾಳೆ ದೆಹಲಿಗೆ
ಕೊಡಗು ಹಾನಿಯ ಬಗ್ಗೆ ಈಗಾಗಲೇ ಕೇಂದ್ರ ಗೃಹ ಸಚಿವರಿಗೆ ವರದಿ ಸಲ್ಲಿಸಿರುವ ರಾಜ್ಯ ಸರ್ಕಾರ.
ಬೆಂಗಳೂರು: ಪ್ರವಾಹ ಪೀಡಿತ ಕೊಡಗಿಗೆ ನೆರವು ಕೇಳಲೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ದೆಹಲಿಗೆ ತೆರಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರನ್ನು ಭೇಟಿಯಾಗಲಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಅವರು, ಕೊಡಗು ಹಾನಿಯ ಬಗ್ಗೆ ಈಗಾಗಲೇ ಕೇಂದ್ರ ಗೃಹ ಸಚಿವರಿಗೆ ವರದಿ ಸಲ್ಲಿಸಿದ್ದೇವೆ. ಆಗಸ್ಟ್ 30 ರಂದು ನಾನೇ ಖುದ್ದಾಗಿ ತೆರಳಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಎರಡು ದಿನದ ಹಿಂದೆಯಷ್ಟೇ ಪ್ರವಾಹ ಪೀಡಿತ ಕೊಡಗಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಈಗಾಗಲೇ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ.