ಮಹಾದಾಯಿ ತೀರ್ಪು ನಮ್ಮ ಪರ ಬರುತ್ತೆ- ಸಿಎಂ ಕುಮಾರಸ್ವಾಮಿ ವಿಶ್ವಾಸ
ತೀರ್ಪಿನಲ್ಲಿ ಅನ್ಯಾಯವಾದರೆ ಕಾನೂನು ಹೋರಾಟ ಮುಂದುವರಿಸುತ್ತೇವೆ- ಕುಮಾರಸ್ವಾಮಿ
ಮಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಸಂಬಂಧದ ಜೆ.ಎಂ.ಪಾಂಚಾಲ ನೇತೃತ್ವದ ಮಹದಾಯಿ ನ್ಯಾಯ ಮಂಡಳಿ ಇಂದು ಸಂಜೆ 4 ಗಂಟೆಗೆ ಅಂತಿಮ ತೀರ್ಪನ್ನು ಪ್ರಕಟಿಸಲಿದೆ.
ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಹಾದಾಯಿ ತೀರ್ಪು ನಮ್ಮ ಪರ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯಾರೂ ಅನಗತ್ಯ ಸಂಘರ್ಷಕ್ಕೆ ಅವಕಾಶ ಮಾಡಿ ಕೊಡಬಾರದು ಎಂದು ಮನವಿ ಮಾಡಿರುವ ಸಿಎಂ ತೀರ್ಪಿನಲ್ಲಿ ಅನ್ಯಾಯವಾದರೆ ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ನ್ಯಾಯ ಮಂಡಳಿ ನೀರನ್ನು ಹಂಚಿ ತೀರ್ಪು ಪ್ರಕಟಿಸಲಿದ್ದು ಭಾರೀ ಕುತೂಹಲ ಮೂಡಿಸಿದೆ. ತೀರ್ಪಿನ ಕುರಿತು ಉತ್ತರ ಕರ್ನಾಟಕ ಭಾಗದ ಜನ ಬಹಳ ಕಾತುರರಾಗಿದ್ದಾರೆ.