ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಸಾವಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ನಂಬಿಕೆ ದ್ರೋಹ ಬಗೆಯುವುದು ಅವರ ರಕ್ತದಲ್ಲಿಯೇ ಕರಗತವಾಗಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.


COMMERCIAL BREAK
SCROLL TO CONTINUE READING

ಸದನದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿ.ಎಸ್.ಯಡಿಯೂರಪ್ಪ ಅವರು, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಸಾವಿಗೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ಮುಖ್ಯಮಂತ್ರಿಯಾಗುವುದಕ್ಕಾಗಿ ಕುಮಾರಸ್ವಾಮಿ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದರು. ಅಧಿಕಾರ ಕಳೆದುಕೊಂದ ನೋವಿನಲ್ಲೇ ಧರಂ ಸಿಂಗ್ ಸಾವನ್ನಪ್ಪಿದರು ಎಂದು ಆರೋಪಿಸಿದರು.


ರಾಜ್ಯದ ಜನತೆಯನ್ನು ವಿರೋಧ ಪಕ್ಷ ದಿಕ್ಕು ತಪ್ಪಿಸುತ್ತಿದೆ: ಸಿಎಂ ಕುಮಾರಸ್ವಾಮಿ


ಮುಂದುವರೆದು ಮಾತನಾಡಿದ ಅವರು, ನೀವು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ಯಡಿಯೂರಪ್ಪ ಮತ್ತು ಬಿಜೆಪಿ ಮುಖ್ಯ ಕಾರಣ ಎಂಬುದನ್ನು ಮರೆಯಬೇಡಿ. ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ಎಲ್ಲಾ ನೋವುಗಳನ್ನು ಸಹಿಸಿಕೊಂಡು ನಾನು ಹಣಕಾಸು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದೆ. ಆದರೆ 20 ತಿಂಗಳ ನಂತರ ಅಧಿಕಾರ ಹಸ್ತಾಂತರ ಮಾಡುವುದರಲ್ಲಿ ಗೊಂದಲ ಉಂಟು ಮಾಡಿ ನಂಬಿಕೆ ದ್ರೋಹ ಮಾಡಿದ್ದಿರಿ, ಎಲ್ಲ ಪಕ್ಷಗಳಿಗೂ ದ್ರೋಹ ಮಾಡುವುದು ನಿಮ್ಮ ರಕ್ತದಲ್ಲಿದೆ ಎಂದು ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು. 


ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಿಂದ ರಾಜ್ಯದ ಲೂಟಿ: ಹೆಚ್ಡಿಕೆ


ಯಡಿಯೂರಪ್ಪ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ ಕುಮಾರಸ್ವಾಮಿ ನನ್ನ ರಕ್ತದ ಬಗ್ಗೆ ಮಾತನಾಡುವುದು ಅಸಾಂವಿಧಾನಿಕ ಪದವಲ್ಲವೇ? ನಾಲಿಗೆಗೆ ಎಲುಬಿಲ್ಲ ಎಂದು ಏನೇನೋ ಮಾತನಾಡಬೇಡಿ ಎಂದು ಹೇಳಿದರು. ಯಡಿಯೂರಪ್ಪ ಅವರ ಆರೋಪಕ್ಕೆ ಕಾಂಗ್ರೆಸ್ ನಾಯಕರೂ ಸಹ ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ವಿಧಾನಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತಾದರೂ, ಸಭಾಧ್ಯಕ್ಷರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.


ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶು: ಕುಮಾರಸ್ವಾಮಿ ಹೇಳಿಕೆ


ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಜನರಿಗೆ ಸಂಪೂರ್ಣ ಸಾಲ ಮನ್ನಾ ಭರವಸೆ ನೀಡಿ ಈಗ ನೆಪ ಹೇಳುತ್ತಿದ್ದೀರಿ. ನಾವು ಅಧಿಕಾರದಲ್ಲಿದ್ದಾಗ ಪ್ರಾಮಾಣಿಕವಾಗಿ ಕೆಲಸ ಮಾಡಿದೇವೆ. ಹಾಗಾಗಿ ವಿಧಾನಸಭೆ ಚುನಾವಣೆಯಲ್ಲಿ 104 ಸ್ಥಾನ ಪಡೆದಿದ್ದೇವೆ. ನಮಗೆ 115 ಸ್ಥಾನ ಗೆಲ್ಲಲು ಆಗದೇ ಇರಬಹುದು, ಆದರೆ ರಾಜ್ಯದ ಜನತೆಯ ಆಶೀರ್ವಾದ ನಮ್ಮ ಮೇಲಿದೆ ಎಂದು ಯಡಿಯೂರಪ್ಪ ಹೇಳಿದರು.