ನವದೆಹಲಿ: ನೂತನ ಸಮ್ಮಿಶ್ರ ಸರ್ಕಾರ ಬಜೆಟ್ ಮಂಡನೆ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. 


COMMERCIAL BREAK
SCROLL TO CONTINUE READING

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿದ್ದು, ಆಗಲೇ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ದೆಹಲಿಯ ತುಘಲಕ್ ರಸ್ತೆಯಲ್ಲಿನ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ ಕುಮಾರಸ್ವಾಮಿ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಜೆಡಿಎಸ್‌ ಹಿರಿಯ ನಾಯಕ ಡ್ಯಾನಿಶ್‌ ಅಲಿ ಮತ್ತು ಕೆ.ಸಿ.ವೇಣುಗೋಪಾಲ್‌ ಅವರು ಕೂಡ ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದ್ದರು.


ಈ ಹಿಂದೆ ಸಮ್ಮಿಶ್ರ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಅಗತ್ಯವಿಲ್ಲ, ಪೂರಕ ಬಜೆಟ್ ಸಾಕು ಎಂದು ಹೇಳಿದ್ದರು. ಆದರೆ, ಅದಕ್ಕೆ ಮುಲ್ಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನೂತನ ಸರ್ಕಾರದ ಯೋಜನೆಗಳನ್ನು ಜನತೆ ತಿಳಿಸಲು ಹೊಸ ಬಜೆಟ್ ಮಂಡನೆಯ ಅಗತ್ಯವಿದೆ ಎಂದು ಹೇಳಿದ್ದರು. ಅಲ್ಲದೆ, ಈ ಬಗೆಗಿನ ಗೊಂದಲ ಬಗೆಹರಿಸಲು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವುದಾಗಿಯೂ ಹೇಳಿದ್ದರು. 


ಆದರೆ, ರಾಹುಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ರಾಹುಲ್ ಗಾಂಧಿ ಭೇಟಿ ಕೇವಲ ಸೌಹಾರ್ಧಯುಟ ಭೇಟಿ ಎಂದರಲ್ಲದೆ, ಕರ್ನಾಟಕದಲ್ಲಿನ ಸಮ್ಮಿಶ್ರ ಸರಕಾರಕ್ಕೆ ಸಂಪೂರ್ಣ ಬೆಂಬಲ ಕೊಡುವುದಾಗಿ ರಾಹುಲ್‌ ಗಾಂಧಿ ಭರವಸೆಕೊಟ್ಟಿರುವುದಾಗಿ ಹೇಳಿದರು.