ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ಬಗ್ಗೆ ಟೀಕಿಸಿದ್ದ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿ ನಾಯಕರ ಕುಹಕ, ವ್ಯಂಗ್ಯ ಮತ್ತು ಟೀಕೆಗಳನ್ನು ಗಮನಿಸಿದ್ದೇನೆ. ಗ್ರಾಮ ವಾಸ್ತವ್ಯ ಮಾಡಲು ಮಾನವೀಯ ಕಳಕಳಿ, ನೈಜ ಅಂತಃಕರಣ ಇರಬೇಕು. ಗ್ರಾಮ ವಾಸ್ತವ್ಯ ಘೋಷಣೆಗೆ ಜನರಿಂದ ದೊರೆತ ಸ್ಪಂದನೆಯೇ ಬಿಜೆಪಿ ನಾಯಕರಿಗೆ ಉತ್ತರ" ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.



ಈ ಹಿಂದೆ ಸಿಎಂ ಗ್ರಾಮವಾಸ್ತವ್ಯ ಕುರಿತು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಅವರು, ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದಿಂದ ತಾಜ್ ವೆಸ್ಟ್ ಎಂಡ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಅಲ್ಲಿ ಯಾವ ಜನಸಾಮಾನ್ಯರನ್ನೂ ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆ ಬಗ್ಗೆ ನಾವು ಟೀಕಿಸಿದ್ದರೂ ತಲೆಕೆಡಿಸಿಕೊಂಡಿರಲಿಲ್ಲ‌. ಆದರೀಗ ಗ್ರಾಮ ವಾಸ್ತವ್ಯ ಮಾಡಲು ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದರು.