ಬೆಂಗಳೂರು: ಉತ್ತರ ಕರ್ನಾಟಕ ಭಾಗದ ನೀರಿನ ಸಮಸ್ಯೆಯನ್ನು ಅರಿತು ರಾಜ್ಯಕ್ಕೆ ನೀರು ಹರಿಸಲು ಒಪ್ಪಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಧನ್ಯವಾದ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಮಳೆಯಿಲ್ಲದೆ ಬರಗಾಲ ಎದುರಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಕ್ಕೆ ನೀರು ಹರಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ. 


ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ, "ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು  ಮಹಾರಾಷ್ಟ್ರ ಸರ್ಕಾರಕ್ಕೆ  ಪತ್ರಗಳನ್ನು ಬರೆದು ನೀರು ಹರಿಸಲು ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಮಹಾರಾಷ್ಟ್ರ ಸಿಎಂ ನೀರು ಹರಿಸಲು ಸಮ್ಮತಿಸಿದ್ದಾರೆ" ಎಂದಿದ್ದಾರೆ.