ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ರಚನೆ ಕುರಿತು ಚರ್ಚಿಸಲು ಬುಧವಾರ ದೆಹಲಿಯಲ್ಲಿ ಸಂಸದರ ಸಭೆ ಕರೆದಿದ್ದಾರೆ. 


COMMERCIAL BREAK
SCROLL TO CONTINUE READING

ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ರಚನೆ ಕುರಿತಂತೆ ಸುಪ್ರೀಂ ಕೋರ್ಟ್ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದ್ದು, ಬುಧವಾರ ಸಂಜೆ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆ ಮತ್ತು ರಾಜ್ಯಸಭೆ ಪ್ರತಿನಿಧಿಸುವ ರಾಜ್ಯದ ಸಂಸರು ಮತ್ತು ರಾಜ್ಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. 


ಇಂದು ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ, ಸಚಿವರಾದ ರಾಮ್‌ ವಿಲಾಸ್‌ ಪಾಶ್ವಾನ್‌ ಹಾಗೂ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಬುಧವಾರ ಬೆಳಿಗ್ಗೆ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಹಣಕಾಸು ಸಚಿವ ಪಿಯೂಷ್‌ ಗೋಯೆಲ್‌ ಅವರನ್ನು ಭೇಟಿ ಮಾಡಿ, ರಾಜ್ಯದ ಅಭಿವೃದ್ಧಿಗೆ ಚರ್ಚೆ ನಡೆಸಲಿದ್ದಾರೆ. ಅಂದು ಸಂಜೆ ಸಂಸದರು ಮತ್ತು ಸಚಿವರೊಂದಿಗೆ ಸಭೆ ನಡೆಸಲಿರುವ ಕುಮಾರಸ್ವಾಮಿ ಅವರು, ಗುರುವಾರ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.