ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೋಮವಾರ ಬೆಳಿಗ್ಗೆ 11:30ಕ್ಕೆ ದೆಹಲಿಯ ನಂ. 7, ಲೋಕಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾತನಾಡಿರುವ ಅವರು ಇದೊಂದು ಸೌಜನ್ಯದ ಭೇಟಿಯಾಗಿದೆ. ರಾಜ್ಯ ಸರ್ಕಾರದ ಕೆಲವು ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಬೇಕಿದ್ದು, ಕೇಂದ್ರ ಸರ್ಕಾರ ಸಹಕಾರಕ್ಕೆ ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರದ ಯಶಸ್ಸಿಗೆ ಕೇಂದ್ರದ ನೆರವು ಅಗತ್ಯವಾಗಿದೆ. ಹಾಗಾಗಿ ಸರ್ಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೋರುತ್ತೇನೆ. ಪ್ರಧಾನಿ ಭೇಟಿ ಬಳಿಕ ಕೇಂದ್ರ ಗೃಹ ಮತ್ತು ಇಂಧನ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ಕಲ್ಲಿದ್ದಲಿನ ಪೂರೈಕೆ ಕುರಿತು ಚರ್ಚೆ ನಡೆಸುವುದಾಗಿ ತಿಳಿಸಿದರು.