ತಿಂಗಳಾಂತ್ಯದಲ್ಲಿ ವಿದೇಶ ಪ್ರವಾಸ ಕೈಗೊಳ್ಳಲಿರುವ ಸಿಎಂ‌‌ ಕುಮಾರಸ್ವಾಮಿ

ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ಪಕ್ಷದ ಕೆಲವು ಸಚಿವರು ಕೂಡ ಅಮೇರಿಕಾ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ

Last Updated : Aug 14, 2018, 12:45 PM IST
ತಿಂಗಳಾಂತ್ಯದಲ್ಲಿ ವಿದೇಶ ಪ್ರವಾಸ ಕೈಗೊಳ್ಳಲಿರುವ ಸಿಎಂ‌‌ ಕುಮಾರಸ್ವಾಮಿ title=

ಬೆಂಗಳೂರು: ಮುಖ್ಯಮಂತ್ರಿ ಆದಮೇಲೆ‌ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್.ಡಿ.  ಕುಮಾರಸ್ವಾಮಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಸಿಎಂ‌ ಕುಮಾರಸ್ವಾಮಿ ತಿಂಗಳಾಂತ್ಯದಲ್ಲಿ  ಒಂದು ವಾರ ಅಮೇರಿಕಾ ಪ್ರವಾಸಕ್ಕೆ ತೆರಳಲಿದ್ದು ಅದಕ್ಕಾಗಿ ಮುಖ್ಯಮಂತ್ರಿ ಕಚೇರಿಯಲ್ಲಿ ಈಗಾಗಲೇ ತಯಾರಿ ಶುರುವಾಗಿವೆ. ಅಮೇರಿಕಾದ ಡಲ್ಲಾಸ್ ನಲ್ಲಿ ನಡೆಯಲಿರುವ ಪ್ರತಿಷ್ಠಿತ ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 29 ರಂದು ಬೆಂಗಳೂರಿನಿಂದ ಹೊರಟು ಸೆಪ್ಟಂಬರ್ 5 ರಂದು ವಾಪಸ್ ಆಗಲಿದ್ದಾರೆ.

ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ಪಕ್ಷದ ಕೆಲವು ಸಚಿವರು ಕೂಡ ಅಮೇರಿಕಾ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ.

Trending News