ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನವೆಂಬರ್20 ರಂದು ಮಧ್ಯಾಹ್ನ 3.00 ಗಂಟೆಗೆ ರೈತ ಮುಖಂಡರು, ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಾವಿ ಮತ್ತು ಬಾಗಲಕೋಟೆ ಎರಡು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಈ ಸಭೆ ಏರ್ಪಡಿಸಲಾಗಿದೆ.



ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಚಿವರ ಉಪಸ್ಥಿತಿಯ ಅಗತ್ಯವಿರುವ ಹಿನ್ನೆಲೆಯಲ್ಲಿ ಸಭೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದು, ಈ ಸಭೆಯ ಕುರಿತು ರೈತ ಮುಖಂಡರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ  ಸೂಚನೆ ನೀಡಲಾಗಿದೆ.