ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಕೇಂದ್ರ ಸರ್ಕಾರ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆಯಾಗದಿರುವುದರಿಂದ ರಾಯಚೂರು ಥರ್ಮಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ  ಕುಂಠಿತವಾಗಿದೆ. 

Last Updated : Oct 24, 2018, 11:11 AM IST
ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ title=

ಬೆಂಗಳೂರು: ರಾಜ್ಯದಲ್ಲಿ  ಲೋಡ್ ಶೆಡ್ಡಿಂಗ್ ಮಾಡದಂತೆ  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.   

ಕೇಂದ್ರ ಸರ್ಕಾರ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆಯಾಗದಿರುವುದರಿಂದ ರಾಯಚೂರು ಥರ್ಮಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ  ಕುಂಠಿತವಾಗಿದೆ. ಕೇಂದ್ರದ ವಿದ್ಯುತ್ ಗ್ರಿಡ್‌ ನಿಂದ ಸಹಾ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್  ಸರಬರಾಜಾಗುತ್ತಿಲ್ಲ. ಹಾಗಾಗಿಯೂ ಸೋಲಾರ್ ಮತ್ತು ಹೈಡ್ರೊ ಪವರ್ ಆದರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ  ವಿದ್ಯುತ್ ಸರಬರಾಜು ಮಾಡಬೇಕು ಎಂದು ಮುಖ್ಯಮಂತ್ರಿಗಳು ಆದೇಶ  ನೀಡಿದ್ದಾರೆ. 

ಮಾಧ್ಯಮಗಳಲ್ಲಿ ಲೋಡ್ ಶೆಡ್ಡಿಂಗ್ ಗೆ ಆದೇಶ ಹೊರಡಿಸಲಾಗಿದೆ ಎಂಬ ಸುದ್ದಿ ಬಂದ ಹಿನ್ನೆಲೆಯಲ್ಲಿ  ಇದನ್ನು ಗಮನಿಸಿದ ಮುಖ್ಯಮಂತ್ರಿಗಳು ಇಂದು ಕೆಪಿಟಿಸಿಎಲ್ ಗೆ ಈ ಸೂಚನೆ ನೀಡಿದ್ದಾರೆ.

Trending News