ಸಿಎಂ ಪದಗ್ರಹಣ: ಕಂಠೀರವ ಸ್ಟೇಡಿಯಂಗೆ ಕನೆಕ್ಟ್ ಆಗೋ ರಸ್ತೆ ಮಾರ್ಗ ಬದಲಾವಣೆ

CM, DCM Oath Taking: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕಾಗಿ ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಇನ್ನೊಂದೆಡೆ ಸ್ಟೇಡಿಯಂ ಸುತ್ತಾ ಮುತ್ತಾ ಸಂಚಾರ ದಟ್ಟಣೆ ಸಾಧ್ಯತೆ ಇರುವುದರಿಂದ ಕಂಠೀರವ ಸ್ಟೇಡಿಯಂ ಗೆ ಕನೆಕ್ಟ್ ಆಗೋ ರಸ್ತೆ ಮಾರ್ಗ ಬದಲಾವಣೆ ಮಾಡಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. 

Written by - Yashaswini V | Last Updated : May 19, 2023, 04:39 PM IST
  • ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳಿಗೆ ನಿರ್ಬಂಧ
  • ಕ್ವೀನ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲಿ ರಸ್ತೆ ಅಥವಾ ಕ್ವಿನ್ಸ್ ರಸ್ತೆಯ ಮೂಲಕ ಸಂಚಾರಕ್ಕೆ ಸೂಚನೆ ನೀಡಲಾಗಿದೆ.
  • ಬಾಳೇಕುಂದ್ರಿ ವೃತ್ತದಿಂದ ಕ್ವೀನ್ ವೃತ್ತದ ಕಡೆಗೆ ತೆರಳುವ ವಾಹನಗಳು- ಪಟ್ಟಾ ಜಂಕ್ಷನ್ ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗೂ ಇತರೆ ವಾಹನಗಳು ಪೊಲೀಸ್‌ ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಸಂಚಾರಕ್ಕೆ ಸೂಚಿಸಲಾಗಿದೆ.
ಸಿಎಂ ಪದಗ್ರಹಣ: ಕಂಠೀರವ ಸ್ಟೇಡಿಯಂಗೆ ಕನೆಕ್ಟ್ ಆಗೋ ರಸ್ತೆ ಮಾರ್ಗ ಬದಲಾವಣೆ title=

CM, DCM Oath Taking Ceremony: ನಾಳೆ ಕಂಠೀರವ ಸ್ಟೇಡಿಯಂನಲ್ಲಿ ನಿಯೋಜಿತ ಸಿಎಂ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಡಿ.ಕೆ. ಶಿವಕುಮಾರ್ ಪ್ರಥಮ ಬಾರಿಗೆ ರಾಜ್ಯದ ಉಪಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಲಿದ್ದಾರೆ.  ಇದಕ್ಕಾಗಿ ಕಾರ್ಯಕ್ರಮಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಾ ಮುತ್ತಾ ಸಂಚಾರ ದಟ್ಟಣೆ ಸಾಧ್ಯತೆ ಇರುವುದರಿಂದ ಕಂಠೀರವ ಸ್ಟೇಡಿಯಂ ಗೆ ಕನೆಕ್ಟ್ ಆಗೋ ರಸ್ತೆ ಮಾರ್ಗ ಬದಲಾವಣೆ ಮಾಡಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. 

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂ ಗೆ ಕನೆಕ್ಟ್ ಆಗೋ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ಕುರಿತಂತೆ ಸಂಚಾರಿ ಪೊಲೀಸರಿಂದ ಮಾರ್ಗಸೂಚಿ ಆದೇಶ ಹೊರಡಿಸಿದ್ದಾರೆ. ನಾಳೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಈ ಮಾರ್ಗಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. 

ಇದನ್ನೂ ಓದಿ- ಸಚಿವ ಸ್ಥಾನಕ್ಕೆ ಶಾಸಕರ ನಡುವೆ ಭಾರಿ ಪೈಪೋಟಿ: ಸಿದ್ದು ಬಣಕ್ಕೆ ಎಷ್ಟು..? ಡಿಕೆ ಬಣಕ್ಕೆ ಎಷ್ಟು..?

ನಾಳೆ (ಮೇ 20) ಯಾವ್ಯಾವ ಮಾರ್ಗದಲ್ಲಿ ಸಂಚಾರಕ್ಕೆ ಬ್ರೇಕ್..?
1) ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳಿಗೆ ನಿರ್ಬಂಧ ಹೇರಲಾಗಿದ್ದು,  ಕ್ವೀನ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲಿ ರಸ್ತೆ ಅಥವಾ ಕ್ವಿನ್ಸ್ ರಸ್ತೆಯ ಮೂಲಕ ಸಂಚಾರಕ್ಕೆ ಸೂಚನೆ ನೀಡಲಾಗಿದೆ. 

2) ಬಾಳೇಕುಂದ್ರಿ ವೃತ್ತದಿಂದ ಕ್ವೀನ್ ವೃತ್ತದ ಕಡೆಗೆ ತೆರಳುವ ವಾಹನಗಳು- ಪಟ್ಟಾ ಜಂಕ್ಷನ್ ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗೂ ಇತರೆ ವಾಹನಗಳು ಪೊಲೀಸ್‌ ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಸಂಚಾರಕ್ಕೆ ಸೂಚಿಸಲಾಗಿದೆ. 

3) ಸಿಟಿಓ ವೃತ್ತದಿಂದ ಕ್ವೀನ್ ವೃತ್ತದ ಕಡೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಬ್ಬನ್ ರಸ್ತೆಯ ಮುಖೇನ ಅನಿಲ್ ಕುಂಬ್ಳೆ ವೃತ್ತದ ಕಥೆಗೆ ಅಥವಾ ಮಣಿಪಾಲ್‌ ಸೆಂಟರ್ ಕಡೆಗೆ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. 

4) ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. 

ಇದನ್ನೂ ಓದಿ- ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ವೇದಿಕೆ  ಸಜ್ಜು : ಕಾರ್ಯಕ್ರಮದಲ್ಲಿ ಸೇರಲಿದೆ ಗಣ್ಯರ ದಂಡು, ಭದ್ರತೆಗೆ ಹೆಚ್ಚಿನ ಒತ್ತು 

ಯಾರಿಗೆ ಎಲ್ಲಿ ಪಾರ್ಕಿಂಗ್ ವ್ಯವಸ್ಥೆ? 
>> ಸಿಎಂ ಪಡಗ್ರಹಣ ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ, ವಿಐಪಿಗಳ  ವಾಹನಗಳಿಗೆ ಸೆಂಟ್ ಜೋಸೆಫ್‌ ಕಾಲೇಜ್‌ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. 

>> ಇದಲ್ಲದೆ, ಅಧಿಕಾರಿಗಳು, ಸಿಬ್ಬಂದಿಗಳಿಗೆ ಬಿಬಿಎಂಪಿ ಮುಖ್ಯ ಕಛೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗೂ ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅನುವು ಮಾಡಿಕೊಡಲಾಗಿದೆ. 

ಈ ಕೆಳಗಿನ ರಸ್ತೆ ಅಕ್ಕ ಪಕ್ಕ ಪಾರ್ಕಿಂಗ್ ಗೆ ನಿರ್ಬಂಧ:- 
* ಆರ್.ಆರ್.ಎಂ.ಆರ್ ರಸ್ತೆ ಹಾಗೂ ಕಸ್ತೂರ್ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ. 

ಹಾಗಾದ್ರೆ ಕಾರ್ಯಕ್ರಮಕ್ಕೆ ಬರೋರಿಗೆ ಎಂಟ್ರಿ ಹೇಗೆ..?
ವಿವಿಐಪಿ, ವಿವಿಐಪಿಗಳಿಗೆ ವಾಹನದಿಂದ ಇಳಿದ ನಂತರ ಕೆ.ಬಿ. ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ ಗಳ ಮೂಲಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. 

ಸಾರ್ವಜನಿಕರ ಎಂಟ್ರಿ, ಪಾರ್ಕಿಂಗ್  ವ್ಯವಸ್ಥೆ ಹೇಗೆ..?
ಕೆಜಿ ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ, ರಿಚ್ ಮಂಡ್ ಸರ್ಕಲ್ ಬಳಿ/ಕ್ವಿನ್ಸ್ ಸರ್ಕಲ್ ಬಳಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಲ್ಲಿಂದ ಅರಮನೆ ಮೈದಾನದಲ್ಲಿ ವಾಹನ ಪಾರ್ಕಿಂಗ್ ಗೆ ಅವಕಾಶ ನೀಡಲಾಗಿದೆ. 

ಸಮಾರಂಭಕ್ಕೆ ಯಾವುದೇ ರೀತಿಯ ಸ್ಫೋಟಕ,  ಚೂಪಾದ ವಸ್ತುಗಳನ್ನು ಬೆಂಕಿಪಟ್ಟಣ, ಲೈಟರ್ ಗಳು ತರದಂತೆ ಸೂಚನೆ ನೀಡಲಾಗಿದೆ. ಮುಖ್ಯ ಕೆಲಸಗಳು, ಪರೀಕ್ಷೆಗೆ ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚನೆ ನೀಡಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News