ಬೆಂಗಳೂರು: ರಾಜ್ಯದ ರೈತರ ಹಿತದೃಷ್ಠಿಯಿಂದ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯ ಅವಧಿ ಇದೇ ಮೇ. 31ಕ್ಕೆ ಕೊನೆಗೊಳ್ಳುತ್ತಿದ್ದು, ಈ ಯೋಜನೆಯನ್ನು ಮುಂದುವರೆಸಬೇಕೆಂದು ಬುಧವಾರ ವಿಧಾನಸೌಧದಲ್ಲಿ ನಡೆದ ಸಾಲ ಮನ್ನಾ ಕುರಿತ ಸಭೆಯಲ್ಲಿ ರೈತರು ಆಗ್ರಹಿಸಿದರು.


ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ರೈತರ ಹಿತದೃಷ್ಠಿಯಿಂದ ಯಶಸ್ವಿನಿ ಯೋಜನೆಯನ್ನು ಮುಂದುವರೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಪ್ರಕಟಿಸಿದರು.


ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ನಿಲ್ಲಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌  ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿತ್ತು.